Share this news

ಕಾರ್ಕಳ,ನ.12: ಕಾರ್ಕಳದ ಶಿರ್ಲಾಲಿನಲ್ಲಿ ಬಡ ಹೈನುಗಾರ ಮಹಿಳೆಗೆ ತಲವಾರು ತೋರಿಸಿ ದನ ಕಳ್ಳತನ ಪ್ರಕರಣ, ನಲ್ಲೂರಿನಲ್ಲಿ ಮನೆಯಲ್ಲೇ ಅಕ್ರಮ ಕಸಾಯಿಖಾನೆ , ತೆಳ್ಳಾರಿನಲ್ಲಿ ಕಾಡುಪ್ರಾಣಿ ಮಾಂಸ ಪತ್ತೆ ಪ್ರಕರಣದ ಆರೋಪಿಗಳು ಕಾಂಗ್ರೆಸ್ ಪಕ್ಷದ ಪರವಾಗಿ ಕೆಲಸ ಮಾಡಿದ್ದು,ಇಂತಹ ಕ್ರಿಮಿನಲ್ ಗಳಿಗೆ ಕಾರ್ಕಳ ಕಾಂಗ್ರೆಸ್ ನೇರ ಬೆಂಬಲ ನೀಡುತ್ತಿದೆ ಎಂದು ಶಾಸಕ ಸುನಿಲ್ ಕುಮಾರ್ ಆರೋಪಿಸಿದ್ದಾರೆ.

ಇಂತಹ ಅಪರಾಧ ಚಟುವಟಿಕೆಗಳು ರಾಜ್ಯದ ಕಾನೂನು-ಸುವ್ಯವಸ್ಥೆಯ ಕರಾಳ ಮುಖದ ನಿಜ ಸ್ವರೂಪ ಬಿಚ್ಚಿಟ್ಟಿದೆ, ಕಾಂಗ್ರೆಸ್ ಈ ಅಕ್ರಮ ಗೋಹತ್ಯೆ ದಂಧೆಯ ಹಣವನ್ನು ಚುನಾವಣೆಗೆ ಬಳಸುತ್ತಿದೆ. ಈ ಆರೋಪಿಗಳಿಂದ ಕಾಂಗ್ರೆಸ್ ಚುನಾವಣಾ ಖಾತೆಗೆ ಹಣದ ಹೊಳೆಯೇ ಹರಿಯುತ್ತಿದೆ ಎನ್ನುವ ಅನುಮಾನವಿದೆ. ರಾಜ್ಯದಲ್ಲಿ ನಮ್ಮದೇ ಕಾಂಗ್ರೆಸ್ ಸರಕಾರ ಇದೆ, ರಕ್ಷಣೆ ನಿಲ್ಲುತ್ತದೆ ಎನ್ನುವ ಕಾರಣಕ್ಕೆ ದುಷ್ಕರ್ಮಿಗಳು ಯಾವುದೇ ಭಯವಿಲ್ಲದೇ ನಿರಂತರ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಇದೇ ಕಾರಣದಿಂದ ಮನೆಮನೆಗಳಲ್ಲಿ ಗೋ ಕಳ್ಳತನ, ಗೋವಧೆ ಹಾಗೂ ಪ್ರಾಣಿ ವಧೆ ಮುಲಾಜಿಲ್ಲದೆ ನಡೆಯುತ್ತಿದೆ. ಹಟ್ಟಿಯಲ್ಲಿರುವ ಗೋವುಗಳಷ್ಟೆ ಅಲ್ಲದೇ ಇವರುಗಳ ವಕ್ರ ದೃಷ್ಟಿ ಅಮಾಯಕ ಕಾಡುಪ್ರಾಣಿಗಳ ಕಡೆಗೂ ಹರಿದಿದೆ. ಕಾಂಗ್ರೆಸ್ ಸರಕಾರವೇ ಇವರನ್ನು ಪೋಷಿಸುತ್ತಿದೆಯೇ?ಕಾಂಗ್ರೆಸ್ ಹಾಗೂ ಸ್ಥಳಿಯ ಕಾಂಗ್ರೆಸ್ ನಾಯಕರ ಬೆಂಬಲ ಇಲ್ಲದೇ ಇಂತಹ ದಂಧೆ ಸಾಧ್ಯವೇ? ಎಂದು ಪ್ರಶ್ನಿಸಿರುವ ಸುನಿಲ್, ಸರಕಾರ ಮತ್ತು ಜಿಲ್ಲಾಡಳಿತ ಇಂತಹ ಕೃತ್ಯದಲ್ಲಿ ತೊಡಗಿಸಿಕೊಂಡವರ ಮಟ್ಟ ಹಾಕಬೇಕು, ಅಪರಾಧಿಗಳ ವಿರುದ್ಧ ತಕ್ಷಣ ಕಠಿಣ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ಬಿಜೆಪಿ ದೊಡ್ಡ ಪ್ರಮಾಣದ ಹೋರಾಟಕ್ಕೆ ಮುಂದಾಗಲಿದೆ ಎಂದು ಎಚ್ಚರಿಕೆ ನೀಡಿದ್ದಾರೆ.

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *