Share this news

ಬೆಂಗಳೂರು : ರಾಜ್ಯದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ಸಾಮಾಜಿಕ ಸಾಮರಸ್ಯ, ವೈಜ್ಞಾನಿಕ ಮನೋಭಾವ ಮತ್ತು ಸಹಬಾಳ್ವೆಯ ವಿದ್ಯಾ-ಕೇಂದ್ರಗಳನ್ನಾಗಿ ರೂಪಿಸಲು 2024-25ನೇ ಸಾಲಿನ ಆಯವ್ಯಯ ಘೋಷಿತ “ನಾವು-ಮನುಜರು” ಕಾರ್ಯಕ್ರಮವನ್ನು ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ಅನುಷ್ಠಾನಗೊಳಿಸುವ ಕುರಿತು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.

ಈ ಕಾರ್ಯಕ್ರಮದಡಿ ಎಲ್ಲಾ ಶಾಲಾ ಕಾಲೇಜುಗಳಲ್ಲಿ ವಾರಕ್ಕೆ 2 ಗಂಟೆಗಳ ವಿಚಾರ ವಿಮರ್ಶೆ ಮತ್ತು ಸಂವಾದ ಚಟುವಟಿಕೆಗಳನ್ನು ಒಳಗೊಂಡ ತರಗತಿಗಳನ್ನು ನಡೆಸಲಾಗುವುದು.
ಮೇಲುಸ್ತುವಾರಿ ಅಧಿಕಾರಿಗಳು ಶಾಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸದರಿ ಕಾರ್ಯಕ್ರಮದ ಅನುಷ್ಠಾನದ ಬಗ್ಗೆ ಖಾತರಿಪಡಿಸಿಕೊಂಡು ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಜಿಲ್ಲಾ ಹಂತದಲ್ಲಿ ನೋಡಲ್ ಅಧಿಕಾರಿಯನ್ನು ನಿಯೋಜಿಸಿ, ಸದರಿ ಕಾರ್ಯಕ್ರಮದ ಯಶಸ್ವಿ ಅನುಷ್ಠಾನದ ಬಗ್ಗೆ ಉಪನಿರ್ದೇಶಕರು ಆಡಳಿತ ಮತ್ತು ಉಪನಿರ್ದೇಶಕರು ಅಭಿವೃದ್ಧಿ ರವರು ಜಂಟಿಯಾಗಿ ವರದಿಯನ್ನು ಸಿದ್ಧಪಡಿಸಿ DSERT  ಕಛೇರಿಗೆ ಸಲ್ಲಿಸಲು ಆದೇಶದಲ್ಲಿ ತಿಳಿಸಲಾಗಿದೆ.

                        

                          

                        

                          

 

Leave a Reply

Your email address will not be published. Required fields are marked *