ಬೆಂಗಳೂರು: ತಿರುಪತಿ ತಿಮ್ಮಪ್ಪನ ಲಡ್ಡಿನಲ್ಲಿ ಪ್ರಾಣಿ ಕೊಬ್ಬು ಸೇರಿಸಲಾಗಿದೆ ಎಂಬ ಆರೋಪ ಕೇಳಿ ಬಂದಿರುವ ಹಿನ್ನೆಲೆಯಲ್ಲಿ ನಂದಿನಿ ಬ್ರಾಂಡ್ ಹೊರತು ಪಡಿಸಿ ಎಲ್ಲಾ ಸಂಸ್ಥೆಗಳ ತುಪ್ಪದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಲು ಸರಕಾರ ನಿರ್ಧರಿಸಿದೆ. ಖಾಸಗಿ ಸಂಸ್ಥೆಗಳು ಸರಬರಾಜು ಮಾಡುವ ತುಪ್ಪದ ಸ್ಯಾಂಪಲ್ ಸಂಗ್ರಹಿಸಿ ತಪಾಸಣೆ ನಡೆಸಲು ಆಹಾರ ಮತ್ತು ಗುಣಮಟ್ಟ ಇಲಾಖೆ ಮುಂದಾಗಿದೆ.
ತಿರುಪತಿ ಲಡ್ಡುವಿನಲ್ಲಿ ಬಳಸಲಾಗುವ ತುಪ್ಪದಲ್ಲಿ ಬೇರೆ ಬೇರೆ ಕೊಬ್ಬಿನಾಂಶ ಇದೆ ಎಂದು ಒಬ್ಬ ಸಿಎಂ ಹೇಳಿರುವುದನ್ನು ಗಂಭೀರವಾಗಿ ಪರಿಗಣಿಸಬೇಕಾಗಿದೆ. ಹೀಗಾಗಿ ರಾಜ್ಯದಲ್ಲಿ ಪರಿಶೀಲನೆ ನಡೆಸಲು ಮುಂದಾಗಿದ್ದೇವೆ. ರಾಜ್ಯದಲ್ಲಿ ನಂದಿನಿ ಹೊರತುಪಡಿಸಿ ಇತರ ಎಲ್ಲಾ ಬ್ರಾಂಡ್ ತುಪ್ಪಗಳ ಸ್ಯಾಂಪಲ್ ಕಲೆಕ್ಟ್ ಮಾಡಿ ಪರೀಕ್ಷಿಸಲಾಗುವುದು. ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡುವ ಪ್ರಕ್ರಿಯೆ ಪ್ರಾರಂಭವಾಗಿದೆ. ತಿರುಪತಿಯಲ್ಲಿ ಆದ ರೀತಿ ಕೊಬ್ಬಿನ ಅಂಶಗಳು ಇಲ್ಲಿ ಬಳಕೆಯಾಗುತ್ತಿರುವ ತುಪ್ಪದಲ್ಲಿ ಇದೆಯಾ ಎಂದು ಪರೀಕ್ಷೆ ನಡೆಸಲಾಗುತ್ತಿದೆ. ತಮಿಳುನಾಡು ಸೇರಿದಂತೆ ಬೇರೆ ಬೇರೆ ರಾಜ್ಯಗಳಿಂದ ರಾಜ್ಯಕ್ಕೆ ತುಪ್ಪ ಬರುತ್ತದೆ. ಆದ್ದರಿಂದ ಎಲ್ಲಾ ಸ್ಯಾಂಪಲ್‌ಗಳನ್ನು ಸಂಗ್ರಹಿಸಿ ಪರಿಶೀಲಿಸಲು ಹೇಳಿದ್ದೇನೆ ಎಂದು ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
ತುಪ್ಪದ ಕಲಬೆರಕೆ ತಡೆಗಟ್ಟುವ ನಿಟ್ಟಿನಲ್ಲಿ ಎಲ್ಲಾ ಬ್ರಾಂಡ್ ತುಪ್ಪದ ಕಾನೂನಾತ್ಮಕ ಆಹಾರ ಮಾದರಿಯನ್ನು ಸಂಗ್ರಹಿ ವಿಶ್ಲೇಷಣೆಗೊಳಪಡಿಸಲು ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಉಪ ಆಯುಕ್ತರು (ಸ್ಕ್ಯಾಡ್) ಆದೇಶ ಹೊರಡಿಸಿದ್ದಾರೆ.







in 
