ಬೆಂಗಳೂರು: ಮುಡಾ ಹಗರಣದ ವಿಚಾರದಲ್ಲಿ ಮಹತ್ವದ ಬೆಳವಣಿಗೆ ನಡೆದಿದ್ದು, ಸಿಎಂ ಸಿದ್ದರಾಮಯ್ಯ ರಾತ್ರೋರಾತ್ರಿ 48 ಸೈಟ್ ಗಳನ್ನು ರದ್ದು ಮಾಡಿದ್ದಾರೆ. ಹಿಂದಿನ ಮುಡಾ ಆಯುಕ್ತ ದಿನೇಶ್ ಕುಮಾರ್ ಎಲ್ಲಾ ಕಾನೂನುಗಳನ್ನು ಗಾಳಿಗೆ ತೂರಿ 48 ಜನರಿಗೆ ಕೋಟ್ಯಾಂತರ ರೂ. ಬೆಲೆ ಬಾಳುವ ಸೈಟ್ ಗಳನ್ನು 5-6 ಲಕ್ಷಕ್ಕೆ ಹಂಚಿದ್ದರು. ಅದನ್ನು ಇದೀಗ ರದ್ದುಪಡಿಸಲಾಗಿದೆ.
ದಿನೇಶ್ ಕುಮಾರ್ ಅಸ್ತಿತ್ವವೇ ಇಲ್ಲದೆ ಸಹಕಾರ ಸಂಘದ ಹೆಸರಿನಲ್ಲಿ ಸೈಟ್ ಗಳನ್ನು ಹಂಚಿಕೆ ಮಾಡಿದ್ದರು. ಸೈಟ್ ಹಂಚಿಕೆಯಲ್ಲಿ ಬೇನಾಮಿ ಇದೆ ಎಂಬ ಆರೋಪ ಬಂದಿತ್ತು, ಇದು ಬಹುದೊಡ್ಡ ಅಕ್ರಮ ಎಂದು ಹಿಂದಿನ ಜಿಲ್ಲಾಧಿಕಾರಿ ರಾಜೇಂದ್ರ ವರದಿ ಕೊಟ್ಟಿದ್ದರು. ಆ ವರದಿಯನ್ನು ಆಂತರಿಕವಾಗಿ ತನಿಖೆ ಮಾಡಿಸಿದ್ದ ರಾಜ್ಯ ಸರ್ಕಾರ ನಿನ್ನೆ ರಾತ್ರೋ ರಾತ್ರಿ ಎಲ್ಲಾ 48 ಸೈಟ್ ಗಳನ್ನು ರದ್ದು ಪಡಿಸಿದೆ. ಈ ಕುರಿತು ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಘುನಂದನ್ ಆದೇಶ ಹೊರಡಿಸಿದ್ದಾರೆ.