ಕಾರ್ಕಳ: ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ ಮುಟ್ಲುಪಾಡಿ ಇದರ ವತಿಯಿಂದ ದಿ. ಪ್ರೀತಮ್ ಶೆಟ್ಟಿ ಸ್ಮರಣಾರ್ಥ ಮೇ.3 ರಂದು ಮುನಿಯಾಲಿನಲ್ಲಿ ಹೊನಲು ಬೆಳಕಿನ ಕಬಡ್ಡಿ ಪಂದ್ಯಾಟ ನಡೆಯಲಿದೆ ಎಂದು ಸ್ಪೋರ್ಟ್ಸ್ ಕ್ಲಬ್ ಗೌರವಾಧ್ಯಕ್ಷ ಹಾಗೂ ಉದ್ಯಮಿ ಗಿರೀಶ್ ಶೆಟ್ಟಿ ತೆಳ್ಳಾರು ಹೇಳಿದರು.
ಅವರು ಕಾರ್ಕಳ ಹೊಟೇಲ್ ಪ್ರಕಾಶ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ರಾಷ್ಟ್ರಮಟ್ಟದ ಸ್ಟಾರ್ ಆಟಗಾರರನ್ನು ಒಳಗೊಂಡ ಒಟ್ಟು 8 ತಂಡಗಳು ಈ ಟೂರ್ನಿಯಲ್ಲಿ ಭಾಗವಹಿಸಲಿವೆ. ಆಟಗಾರರನ್ನು ಬಿಡ್ಡಿಂಗ್ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಈ ತಂಡಗಳನ್ನು ರಾಷ್ಟ್ರಮಟ್ಟದ 8 ಫ್ರಾಂಚೈಸಿಗಳಿಗೆ ಖರೀದಿಗೆ ಅವಕಾಶವಿದ್ದು ಈ ಪೈಕಿ ಎರಡು ತಂಡಗಳನ್ನು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಮೀಸಲಿರಿಸಲಾಗಿದೆ ಎಂದರು.ಒಟ್ಟು ಎರಡು ಕೋರ್ಟ್ ಗಳಲ್ಲಿ ಪಂದ್ಯ ನಡೆಯಲಿದ್ದು, ಇದಕ್ಕೂ ಮೊದಲು ಕಾರ್ಕಳ ವಿಧಾನಸಭಾ ಕ್ಷೇತ್ರದ ಸ್ಥಳೀಯ ತಂಡಗಳ ಕಬಡ್ಡಿ ಪಂದ್ಯಾಟ ನಡೆಯಲಿದೆ, ಸಂಜೆ 6 ರಿಂದ ಪ್ರೊ ಕಬಡ್ಡಿ ಪಂದ್ಯಾಟ ನಡೆಯಲಿದೆ.
ವಿಜೇತ ತಂಡಕ್ಕೆ 1 ಲಕ್ಷ ನಗದು ,ರನ್ನರ್ ಅಪ್ ತಂಡಕ್ಕೆ 75 ಸಾವಿರ, ಹಾಗೂ ತೃತೀಯ ಹಾಗೂ ಚತುರ್ಥ ಬಹುಮಾನವಾಗಿ ತಲಾ 50 ಸಾವಿರ ನೀಡಲಾಗುವುದು ಇದಲ್ಲದೇ ಎಲ್ಲಾ ತಂಡಗಳಿಗೆ ತಲಾ 25 ಪ್ರೋತ್ಸಾಹಕರ ಬಹುಮಾನ ನೀಡಲಾಗುವುದೆಂದರು. ಈ ಪಂದ್ಯಾವಳಿಯನ್ನು ವೀಕ್ಷಿಸಲು 25 ಸಾವಿರ ಪ್ರೇಕ್ಷಕರು ಸೇರುವ ನಿರೀಕ್ಷೆಯಿದ್ದು, ಸಾಕಷ್ಟು ಜನ ಸಿನಿಮಾರಂಗದ ಸೆಲೆಬ್ರಿಟಿಗಳು ರಾಜಕೀಯ ನಾಯಕರು ಭಾಗವಹಿಸಲಿದ್ದಾರೆ ಎಂದು ಗಿರೀಶ್ ಶೆಟ್ಟಿ ವಿವರಿಸಿದರು.
ಸುದ್ದಿಗೋಷ್ಟಿಯಲ್ಲಿ ಕಬಡ್ಡಿ ಕ್ರೀಡಾಪಟು ಜಗದೀಶ್ ಕುಂಬ್ಳೆ, ಸುನಿಲ್ ಹೆಗ್ಡೆ, ಅರ್ಧನಾರೀಶ್ವರ ಸ್ಪೋರ್ಟ್ಸ್ ಕ್ಲಬ್ ಕೋಶಾಧಿಕಾರಿ ಸುದೀಪ್ ಅಜಿಲ, ಉದ್ಯಮಿಗಳಾದ ಗೋಪಿನಾಥ್ ಭಟ್, ಹರೀಶ್ ಶೆಟ್ಟಿ,ಸುಹಾಸ್ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು
K