ಹೆಬ್ರಿ: ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಹೆಬ್ರಿ ತಾಲೂಕಿನ ಅಂಗನವಾಡಿ, ಶಾಲೆ ಹಾಗೂ ಕಾಲೇಜುಗಳಿಗೆ ರಜೆ ಘೋಷಿಸಿ ಹೆಬ್ರಿ ತಹಶಿಲ್ದಾರ್ ಎ.ಎಸ್ ಪ್ರಸಾದ್ ಆದೇಶಿಸಿದ್ದಾರೆ.
ಪ್ರಮುಖವಾಗಿ ನಾಡ್ಪಾಲು ಗ್ರಾಮದ ಸೀತಾನದಿ, ಮೇಗದ್ದೆ, ನೆಲ್ಲಿಕಟ್ಟೆ ಶಾಲೆಗಳ ವ್ಯಾಪ್ತಿಯಲ್ಲಿ ಪ್ರವಾಹ ಭೀತಿ ಹಿನ್ನೆಲೆಯಲ್ಲಿ ಈ ಕ್ರಮ ವಹಿಸಲಾಗಿದೆ.















