ಕಾರ್ಕಳ: ಯಾವುದೇ ಕೆಲಸಕ್ಕೆ ಸೇರಿದಾಗ ಕಷ್ಟ ಬರುವುದು ಸಹಜ. ಅದಕ್ಕಾಗಿ ನಾವು ಕುಗ್ಗದೆ, ಕಷ್ಟಪಟ್ಟು ಕೆಲಸ ಮಾಡಿದರೆ ಯಶಸ್ಸು ನಮ್ಮ ಪಾಲಾಗುವುದರಲ್ಲಿ ಸಂಶಯವಿಲ್ಲ. ಆರೋಗ್ಯವನ್ನು ಚೆನ್ನಾಗಿ ನೋಡಿಕೊಂಡು, ಶೃದ್ಧೆಯಿಂದ ಕೆಲಸ ಮಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಬೇಕು. ವಿದ್ಯಾರ್ಥಿಗಳು ಬೇರೆ ಬೇರೆ ಕೋರ್ಸುಗಳ ಬಗ್ಗೆಯೂ ಗಮನಹರಿಸಬೇಕು. ಇನ್ಫೋಸಿಸ್ ನಾರಾಯಣ ಮೂರ್ತಿ ಅಂತಹವರು ಸಂಸ್ಥೆಯನ್ನು ಕಟ್ಟಿ ಬೆಳೆಸಿ ಯಶಸ್ಸು ಗಳಿಸಿದ್ದು ನಿಮಗೆಲ್ಲಾ ಮಾದರಿಯಾಗಬೇಕು ಎಂದು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಎನ್‌ಎಂಐಟಿಯ ಅಸಿಸ್ಟೆಂಟ್ ಪ್ರೊಫೆಸರ್ ಶ್ರೀಮತಿ ವೀಣಾ ಕುಮಾರಿ ಹೇಳಿದರು.
ಅವರು ಶ್ರೀ ಭುವನೇಂದ್ರ ಕಾಲೇಜು ಕಾರ್ಕಳ ಇಲ್ಲಿನ ಐಟಿ ಕ್ಲಬ್‌ನ ಉದ್ಘಾಟನೆಂiÀiನ್ನು ನೆರವೇರಿಸಿ ಮಾತನಾಡುತ್ತಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಡಾ. ಮಂಜುನಾಥ ಎ ಕೋಟ್ಯಾನ್ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ದತ್ತಾತ್ರೇಯ ಮಾರ್ಪಳ್ಳಿ, ಐಕ್ಯೂಎಸಿ ಕೋಆರ್ಡಿನೇಟರ್ ಪ್ರೊ. ಎಚ್. ಜಿ. ನಾಗಭೂಷಣ್ ಹಾಗೂ ಐಟಿ ಕ್ಲಬ್ ಇದರ ಸಂಯೋಜಕರಾದ ಶ್ರೀಮತಿ ಸ್ವಾತಿ ಕೆ ಉಪಸ್ಥಿತರಿದ್ದರು.
ಶ್ರೀಮತಿ ಸ್ವಾತಿ ಕೆ ಇವರು ಅತಿಥಿಗಳನ್ನು ಸ್ವಾಗತಿಸಿದರು. ವಿದ್ಯಾರ್ಥಿನಿಯರಾದ ಅದಿತಿ ಕಾರಂತ್ ಕಾರ್ಯಕ್ರಮ ನಿರೂಪಿಸಿ, ಶ್ರದ್ಧಾ ಶೆಟ್ಟಿ ವಂದಿಸಿದರು.