
ಕಾರ್ಕಳ, ಫೆ.25: ಕಾರ್ಕಳದ ಜೋಡುರಸ್ತೆಯ ಕಾರ್ಲ ಸಿಟಿ ಸೆಂಟರ್ ಕಟ್ಟಡದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ “ಮಾನಸ ಕಂಫರ್ಟ್ಸ್” ಇದರ ಉದ್ಘಾಟನಾ ಸಮಾರಂಭವು ನಾಳೆ (ಫೆ. 26) ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ.
ಮಾಜಿ ಮುಖ್ಯಮಂತ್ರಿಗಳಾದ ಎಂ.ವೀರಪ್ಪ ಮೊಯಿಲಿ ಉದ್ಘಾಟನೆ ನೆರವೇರಿಸಲಿದ್ದು, ಕುಕ್ಕುಂದೂರು ಪಂಚಾಯತ್ ಅಧ್ಯಕ್ಷೆ ಉಷಾ.ಕೆ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಶಾಸಕ ವಿ.ಸುನಿಲ್ ಕುಮಾರ್, ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷ ಮಂಜುನಾಥ ಪೂಜಾರಿ, ಮಾಜಿ ಸಚಿವರಾದ ವಿನಯ ಕುಮಾರ್ ಸೊರಕೆ, ಜಯಪ್ರಕಾಶ್ ಹೆಗ್ಡೆ, ಉದಯಕೃಷ್ಣಯ್ಯ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ,ಜ್ಞಾನಸುಧಾ ಸಮೂಹ ಸಂಸ್ಥೆಗಳ ಅಧ್ಯಕ್ಷ ಡಾ. ಸುಧಾಕರ ಶೆಟ್ಟಿ, ಕ್ರಿಯೇಟಿವ್ ಎಜ್ಯುಕೇಶನ್ ಫೌಂಡೇಶನ್ ನ ಸಹಸಂಸ್ಥಾಪಕ ಡಾ.ಗಣನಾಥ ಶೆಟ್ಟಿ, ನ್ಯಾಯವಾದಿಗಳಾದ ಶೇಖರ ಮಡಿವಾಳ, ಮಣಿರಾಜ್ ಶೆಟ್ಟಿ, ಪುರಸಭಾ ಸದಸ್ಯ ಅಶ್ಪಕ್ ಅಹ್ಮದ್, ನಿಟ್ಟೆ ಸಂತೋಷ್ ಕ್ಯಾಶ್ಯೂಸ್ ನ ಸಂತೋಷ್ ಡಿ’ಸಿಲ್ವ ಮೊದಲಾದವರು ಭಾಗವಹಿಸಲಿದ್ದಾರೆ.


.
.
.
.
.
.
.
.
.
.
