ಹೆಬ್ರಿ: ಹೆಬ್ರಿ ತಾಲೂಕಿನ ಮುನಿಯಾಲು ಆಟೋ ರಿಕ್ಷಾ ಚಾಲಕ ಮತ್ತು ಮಾಲಕರÀ ಸಂಘವು ಜ.19 ರಂದು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘದಲ್ಲಿ ಉದ್ಘಾಟನೆಗೊಳ್ಳಲಿದೆ.
ಆಟೋ ರಿಕ್ಷಾ ಚಾಲಕ ಮತ್ತು ಮಾಲಕರ ಸಂಘದ ಸದಸ್ಯರು ಬಹಳ ವರ್ಷದಿಂದ ಊರಿನ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಕ್ತದಾನ ಶಿಬಿರ, ಸ್ವಚ್ಛತಾ ಕಾರ್ಯಕ್ರಮ, ಅರೋಗ್ಯ ತಪಾಸಣಾ ಕಾರ್ಯಕ್ರಮಗಳನ್ನು ನಡೆಸುತ್ತಾ ಬಂದಿದ್ದು, ಇದೀಗ ತಮ್ಮದೇ ಆದ ನೂತನ ಸಂಘದ ಉದ್ಘಾಟನೆ ನೆರವೇರಲಿದೆ ಎಂದು ಎಂದು ಸಂಘದ ಗೌರವಾಧ್ಯಕ್ಷ ದಿನೇಶ್ ಪೈ ಮುನಿಯಾಲು, ಕಾನೂನು ಸಲಹೆಗಾರÀ ಭರತ್ ಕುಮಾರ್ ಶೆಟ್ಟಿ, ಸಂಘದ ಅಧ್ಯಕ್ಷ ಕೃಷ್ಣ ಶೆಟ್ಟಿಗಾರ್, ಕೋಶಾಧಿಕಾರಿಗಳಾದ ದಿನೇಶ್ ನಾಯ್ಕ್ ,ಪ್ರದಾನ ಕಾರ್ಯದರ್ಶಿ ಸಂತೋಷ್ ನಾಯ್ಕ್ ಮತ್ತು ಸರ್ವ ಸದಸ್ಯರು ತಿಳಿಸಿದ್ದಾರೆ.