Share this news

ಕಾರ್ಕಳ: ಜೀರ್ಣೋದ್ಧಾರಗೊಳ್ಳುತ್ತಿರುವ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್ ರಸ್ತೆಯ ಉದ್ಘಾಟನೆಯನ್ನು ಶಾಸಕ ವಿ ಸುನಿಲ್ ಕುಮಾರ್ ರವರು ಭಾನುವಾರನೆರವೇರಿಸಿದರು.

ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯ ನಿಧಿ ಹಾಗೂ ಇತರ ಅನುದಾನವನ್ನು ಬಳಸಿಕೊಂಡು ಒಟ್ಟು 15 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆಯನ್ನು ನಿರ್ಮಾಣ ಮಾಡಲಾಗಿದ್ದು, ಸಂಪೂರ್ಣ ಶಿಲಾಮಯವಾಗಿ ಜೀರ್ಣೋದ್ಧಾರಗೊಂಡು ಬ್ರಹ್ಮಕಲಶೋತ್ಸವಕ್ಕೆ ಸಿದ್ಧವಾಗಿರುವ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ರಥಬೀದಿಯ ನೂತನ ಕಾಂಕ್ರೀಟ್ ರಸ್ತೆ ನಿರ್ಮಾಣಕ್ಕೆ ಕಳೆದ ಕೆಲವು ದಿನಗಳ ಹಿಂದೆ ಮಾನ್ಯ ಶಾಸಕರು ಗುದ್ದಲಿ ಪೂಜೆಯನ್ನು ನೆರವೇರಿಸಿದ್ದರು.

ಈ ಸಂದರ್ಭ ಮಿಯ್ಯಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಗಣಪತಿ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ತಾರಾನಾಥ ಕೋಟ್ಯಾನ್, ಗ್ರಾಮ ಪಂಚಾಯತ್ ಅಧ್ಯಕ್ಷೆ ಸನ್ಮತಿ ನಾಯಕ್, ದೇವಸ್ಥಾನದ ಅರ್ಚಕರಾದ ಶ್ರೀ ಹರಿದಾಸ ಭಟ್, ಮಾಧವ ಕಾಮತ್, ಕಮಲಾಕ್ಷ ಕಾಮತ್, ಸತ್ಯೇಂದ್ರ ನಾಯಕ್, ರಾಮದಾಸ್ ಸಾಕಳ್ಕರ್,ರೋಹಿತ್ ಕುಮಾರ್, ನವೀನ್ ಬಂಗೇರಾ,ಗಿರೀಶ್ ಪೈ,ರಮೇಶ್ ಹೆಗ್ಡೆ, ರವಿ ಹೆಗ್ಡೆ, ಪ್ರಶಾಂತ್ ಪೂಜಾರಿ, ಮನ್ಮಥ ಶೆಟ್ಟಿ, ದಿನೇಶ್ ಶೆಟ್ಟಿ, ಮತ್ತು ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.


 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *