ಕಾರ್ಕಳ: ‘ಪ್ರಸ್ತುತ ದಿನಗಳಲ್ಲಿ ಪಠ್ಯವನ್ನು ಓದಿ ಜ್ಞಾನಗಳಿಸುವುದರೊಂದಿಗೆ ಪ್ರಾಯೋಗಿಕ ಜ್ಞಾನವೂ ಅಗತ್ಯವೆಂಬುದನ್ನು ನಾವು ಅರಿಯಬೇಕು. ಉದ್ಯೋಗದಲ್ಲಿ ಉನ್ನತಿ ಪಡಯಲು ಅಗತ್ಯ ಕೌಶಲ್ಯಗಳನ್ನು ಕರಗತಗೊಳಿಸುವುದು ಅತ್ಯಗತ್ಯ’ ಎಂದು ಬೆಂಗಳೂರಿನ ಕಿಪ್ಲೋ ಸಂಸ್ಥೆಯ ಸಂಸ್ಥಾಪಕ ಮತ್ತು ಸಿಇಒ ಪ್ರೀತಂ ಪೂವಾನಿ ಅಭಿಪ್ರಾಯಪಟ್ಟರು.
ಅವರು ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಎಂ.ಸಿ.ಎ ವಿಭಾಗದ ವಾರ್ಷಿಕ ಎರಡು ದಿನಗಳ ಟೆಕ್ ಉತ್ಸವವಾದ ‘ಸೆಮಫೋರ್’ನ್ನು ಉದ್ಘಾಟಿಸಿ ಅವರು ಮಾತನಾಡಿದರು. ‘ಯಾವುದೇ ವೃತ್ತಿಯನ್ನು ಆರಂಭಿಸುವ ಸಂದರ್ಭದಲ್ಲಿ ನಾವು ಸಂಪಾದನೆಯ ಬಗ್ಗೆ ಹೆಚ್ಚಿನ ವ್ಯಾಮೋಹ ಹೊಂದಿರಬಾರದು. ಭವಿಷ್ಯವನ್ನು ಕಟ್ಟಿಕೊಳ್ಳಲು ತಂತ್ರಜ್ಞಾನ ಹಾಗೂ ಆಡಳಿತ ಜ್ಞಾನವೆರಡನ್ನೂ ಹೊಂದುವುದು ಉತ್ತಮ’ ಎಂದು ಅವರು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ತಮ್ಮ ಅಧ್ಯಕ್ಷೀಯ ನುಡಿಗಳಲ್ಲಿ ಜಾಗತಿಕ ಸವಾಲುಗಳನ್ನು ಎದುರಿಸಲು ಕುತೂಹಲ ಮತ್ತು ನಾವೀನ್ಯತೆಯನ್ನು ಅಳವಡಿಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸಿದರು.
ಸೆಮಫೋರ್ ಫೆಸ್ಟ್ ಕಾರ್ಯಕ್ರಮದಡಿಯಲ್ಲಿ ನಡೆಸಲಾಗುವ ವಿವಿಧ ಸ್ಪರ್ಧೆಗಳಲ್ಲಿ ಭಾಗವಹಿಸಲು ದಕ್ಷಿಣ ಭಾರತದ ಹಲವು ರಾಜ್ಯಗಳ ವಿವಿಧ ಕಾಲೇಜುಗಳಿಂದ ವಿದ್ಯಾರ್ಥಿಗಳು ಆಗಮಿಸಿದ್ದರು.
ಕಾಲೇಜಿನ ಎಂ.ಸಿ.ಎ ವಿಭಾಗದ ಮುಖ್ಯಸ್ಥೆ ಡಾ| ಮಮತಾ ಬಲಿಪ ಸ್ವಾಗತಿಸಿದರು. ಸೆಮಫೋರ್ ಸ್ಟಾಫ್ ಕಾರ್ಡಿನೇಟರ್ ಶರತ್ ಕೆ ಆರ್ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿನಿ ಮಿಶಲ್ ಪ್ರಾಂಶುಪಾಲರನ್ನು ಸಭೆಗೆ ಪರಿಚಯಿಸಿದರು. ಎಸ್ ಎಎಂಸಿಎ ವಿದ್ಯಾರ್ಥಿ ನಾಯಕ ಭೂಷಣ್ ಎ. ಬಂಗೇರ ಅವರು ಹಿಂದಿನ ವರ್ಷದ ಸೆಮಾಫೋರ್ ನ ಯಶಸ್ಸು ಮತ್ತು ಮುಖ್ಯಾಂಶಗಳನ್ನು ವಿವರಿಸಿದರು. ದೀಪಿತ್ ಅವರು ಈ ವರ್ಷದ ಉತ್ಸವದ ದೃಷ್ಟಿಕೋನ ಮತ್ತು ಯೋಜನೆಗಳನ್ನು ಹಂಚಿಕೊAಡರು. ಸ್ಯಾಮ್ಕಾ ಕಾರ್ಯದರ್ಶಿ ರಾನಿಕಾ ವಂದಿಸಿದರು. ವಿದ್ಯಾರ್ಥಿಗಳಾದ ವಿಶ್ವರೂಪ ಹಾಗೂ ಪ್ರಣಮ್ಯ ಕಾರ್ಯಕ್ರಮ ನಿರೂಪಿಸಿದರು.
ಟ್ರೋಫಿ ಅನಾವರಣದೊಂದಿಗೆ ಸಭಾಕಾರ್ಯಕ್ರಮವು ಕೊನೆಗೊಂಡಿತು. ಇದು ಉತ್ಸವದ ವಿವಿಧ ತಾಂತ್ರಿಕ ಕಾರ್ಯಕ್ರಮಗಳಿಗೆ ಸ್ಪರ್ಧಾತ್ಮಕ ಮನೋಭಾವ ಮತ್ತು ಉತ್ಸಾಹವನ್ನು ಸೂಚಿಸುತ್ತದೆ.
ಕಾರ್ಕಳ:ನಕ್ಸಲ್ ನಿಗ್ರಹ ಪಡೆಯ ಪೊಲೀಸರು ಕುಖ್ಯಾತ ನಕ್ಸಲ್ ವಿಕ್ರಂ ಗೌಡನನ್ನು ಎನ್’ಕೌಂಟರ್ ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸರ ಕಾರ್ಯಶೈಲಿ ಶ್ಲಾಘನೀಯ. ಜೀವದ ಹಂಗು ತೊರೆದು ದೇಶ ವಿರೋಧಿ ಶಕ್ತಿಗಳನ್ನು ಯಾವುದೇ ಮುಲಾಜಿಗೆ ಒಳಗಾಗದೇ ಹತ್ತಿಕ್ಕಿದ ANF ಪೊಲೀಸರ ಕಾರ್ಯವೈಖರಿ ಅಭಿನಂದನೀಯ ಎಂದು ಕಾರ್ಕಳ ಶಾಸಕ ಹಾಗೂ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸುನಿಲ್ ಕುಮಾರ್ ಹೇಳಿದ್ದಾರೆ.
ಆದರೆ ಈ ಘಟನೆಯ ಬಳಿಕ ಕೆಲವು ಪ್ರಶ್ನೆಗಳು ಉದ್ಭವಿಸಿವೆ. ರಾಜ್ಯದಲ್ಲಿ ಈ ಹಿಂದೆ ಸ್ಥಗಿತಗೊಂಡಿದ್ದ ನಕ್ಸಲ್ ಚಟುವಟಿಕೆ ಇದೀಗ ಹದಿನೈದು ವರ್ಷಗಳ ಬಳಿಕ ಮತ್ತೆ ಕಾಣಿಸಿಕೊಂಡಿದ್ದು,ನಕ್ಸಲರು ಬಹಿರಂಗವಾಗಿ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು ? ಅಥವಾ ಕಾರಣ ಯಾರು ?
ರಾಜ್ಯ ಸರ್ಕಾರ, ಅದರಲ್ಲೂ ವಿಶೇಷವಾಗಿ ಸಿಎಂ ಸಿದ್ದರಾಮಯ್ಯ ಅವರು ಪ್ರತ್ಯಕ್ಷ ಹಾಗೂ ಪರೋಕ್ಷವಾಗಿ ನಗರ ನಕ್ಸಲರ ಬಗ್ಗೆ ತೋರುತ್ತಿರುವ ವಿಶೇಷ ಪ್ರೀತಿ ಇದಕ್ಕೆ ಪ್ರೇರಣೆಯಲ್ಲವೇ ?
ಸ್ಥಳೀಯ ಜನಪ್ರತಿನಿಧಿಗಳು ಅಭಿವೃದ್ಧಿ ವಿಚಾರದಲ್ಲಿ ತೋರಿದ ವಿಶೇಷ ಆಸಕ್ತಿಯಿಂದ ಸ್ಥಳೀಯರು ನಕ್ಸಲ್ ಸಿದ್ಧಾಂತವನ್ನು ತಿರಸ್ಕರಿಸಿದ್ದರು. ಸ್ಥಳೀಯರ ಬೆಂಬಲವಿಲ್ಲದೇ ಅಳಿದು ಹೋಗುವ ಹಂತಕ್ಕೆ ತಲುಪಿದ್ದ ನಕ್ಸಲ್ ಚಟುವಟಿಕೆ ಇದೀಗ ಕಾಂಗ್ರೆಸ್ ಸರ್ಕಾರ ಬರುತ್ತಿದ್ದಂತೆ ಮತ್ತೆ ತಲೆ ಎತ್ತಿದೆ.
ಸಿದ್ದರಾಮಯ್ಯನವರೇ ದೇಶವಿರೋಧಿ ಹಾಗೂ ಬುಡಮೇಲು ಕೃತ್ಯಕ್ಕೆ ನೆರವಾಗುವವರಿಗೆ ಆದರ್ಶದ ನೆಪದಲ್ಲಿ ಬೆಂಬಲ ರಕ್ಷಣೆ ಬೇಡ. ಇದು ಪಶ್ಚಿಮಘಟ್ಟ ಜನರ ಶಾಂತಿ- ನೆಮ್ಮದಿ ಕೆಡಿಸಲಿದೆ. ಹೀಗಾಗಿ ನಕ್ಸಲ್ ನಿಗ್ರಹ ಕಾರ್ಯಾಚರಣೆಯನ್ನು ಇನ್ನಷ್ಟು ಬಲಗೊಳಿಸಿ. ಎ ಎನ್ಎಫ್ ಗೆ ಹೆಚ್ಚಿನ ಸಿಬ್ಬಂದಿ ನಿಯೋಜಿಸಿ. ನಕ್ಸಲ್ ಚಟುವಟಿಕೆ ಹತ್ತಿಕ್ಕಿ ಜತೆಗೆ ಪಶ್ಚಿಮಘಟ್ಟ ಭಾಗದಲ್ಲಿ ಅಭಿವೃದ್ಧಿ ಕಾರ್ಯವನ್ನೂ ಚುರುಕುಗೊಳಿಸಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶಾಸಕ ಸುನಿಲ್ ಕುಮಾರ್ ಆಗ್ರಹಿಸಿದ್ದಾರೆ
ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರವನ್ನು ನೆಲಸಮಗೊಳಿಸಿ ಅಲ್ಲೇ ಮಸೀದಿಯನ್ನು ಮತ್ತೆ ಕಟ್ಟುತ್ತೇವೆ ಎಂದು ಬಾಂಗ್ಲಾದೇಶಿ ಇಸ್ಲಾಮಿಸ್ಟ್ ಉಗ್ರ ಸಂಘಟನೆ ಪ್ರತಿಜ್ಞೆ ಮಾಡುವ ಮೂಲಕ ಭಾರತದ ವಿರುದ್ಧ ಬಹಿರಂಗ ಬೆದರಿಕೆ ಹಾಕಿದೆ.
ನಾವು ಭಾರತವನ್ನು ಇಸ್ಲಾಮಿಕ್ ರಾಷ್ಟ್ರವನ್ನಾಗಿ ಮಾಡಲು ಕೆಲಸ ಮಾಡುತ್ತಿದ್ದೇವೆ. ಇಸ್ಲಾಮಿಕ್ ಯುವಕರೇ, ನಿಮ್ಮ ಬಳಿ ಏನಿದೆಯೋ ಅದರೊಂದಿಗೆ ಸಿದ್ಧರಾಗಿರಿ, ಏಕೆಂದರೆ ಭಾರತದ ಮೇಲೆ ದಾಳಿ ಮಾಡಬೇಕು.ನಾವು ರಾಮ ಮಂದಿರವನ್ನು ನೆಲಸಮಗೊಳಿಸಿ ಮತ್ತೆ ಮಸೀದಿಯನ್ನು ನಿರ್ಮಿಸುತ್ತೇವೆ. ನರೇಂದ್ರ ಮೋದಿ ಅವರ ಎರಡೂ ಕೆನ್ನೆಗಳಿಗೆ ಶೂಗಳಿಂದ ಹೊಡೆಯುತ್ತೇನೆ. ಆಟವನ್ನು ಅವರೊಂದಿಗೆ ಆಡುತ್ತೇವೆ, ನಾವು ಸಿದ್ಧರಿದ್ದೇವೆ” ಎಂದು ತೀವ್ರಗಾಮಿ ಬಾಂಗ್ಲಾದೇಶಿ ಇಸ್ಲಾಮಿಸ್ಟ್ ವಿಡಿಯೋದಲ್ಲಿ ಘೋಷಿಸಿದ್ದಾನೆ.
ಬಾಂಗ್ಲಾದೇಶದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ, ವಿಶೇಷವಾಗಿ ಹಿಂದೂ ಸಮುದಾಯದ ಸುರಕ್ಷತೆಯ ಬಗ್ಗೆ ಹೆಚ್ಚುತ್ತಿರುವ ಕಳವಳಗಳ ಮಧ್ಯೆ ಈ ವೀಡಿಯೊ ಬಂದಿದೆ. ಇತ್ತೀಚಿನ ವಾರಗಳಲ್ಲಿ ಹಿಂದೂ ಮನೆಗಳು, ವ್ಯವಹಾರಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿಗಳು ಆತಂಕಕಾರಿಯಾಗಿ ಹೆಚ್ಚುತ್ತಿದ್ದು, ಮಾನವ ಹಕ್ಕುಗಳ ಸಂಘಟನೆಗಳಲ್ಲಿ ಎಚ್ಚರಿಕೆಯನ್ನು ಹೆಚ್ಚಿಸಿದೆ.