ಕಾರ್ಕಳ: ಕಲಂಬಾಡಿ ಪದವು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ 2024 – 25 ನೇ ಸಾಲಿನ ಯಕ್ಷಗಾನ ತರಗತಿಯ ಉದ್ಘಾಟನಾ ಕಾರ್ಯಕ್ರಮವು ಶನಿವಾರ ನಡೆಯಿತು.
ಶಾಲಾ ಎಸ್.ಡಿ. ಎಂ.ಸಿ. ಅಧ್ಯಕ್ಷ ದಯಾನಂದ ನಾಯಕ್ ಅಧ್ಯಕ್ಷತೆ ವಹಿಸಿದ್ದರು,
ಯಕ್ಷಗಾನ ಭಾಗವತರಾದ ಮೋಹನ್ ಕಲಂಬಾಡಿ, ಹಳೆ ವಿದ್ಯಾರ್ಥಿ ಸಂಘದ ಸ್ಥಾಪಕ ಅಧ್ಯಕ್ಷರಾದ ಸುರೇಶ್ ಆಚಾರ್ಯ, ಮುಖ್ಯ ಶಿಕ್ಷಕರಾದ ನಾಗರಾಜ್ ಬಿ. ಉಪಸ್ಥಿತರಿದ್ದರು.
ಶಿಕ್ಷಕಿ ಸುಲೋಚನ ಸ್ವಾಗತಿಸಿ, ಶಿಕ್ಷಕಿ ಸುಜಲ ವಂದಿಸಿದರು. ಶಿಕ್ಷಕಿ ರಶ್ಮಿ ದೇವಾಡಿಗ ಕಾರ್ಯಕ್ರಮ ನಿರೂಪಿಸಿದರು.
ಎಲ್ಲಾ ಶಿಕ್ಷಕರ ವರ್ಗದವರು ಮತ್ತು ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
