ಬೆಂಗಳೂರು: ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ಅತಿಥಿ ಶಿಕ್ಷಕರಿಗೆ ಹಾಗೂ ಪದವಿ ಪೂರ್ವ ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಗೌರವ ಧನವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ.
ಸದರಿ ಪ್ರಾಥಮಿಕ ಶಾಲೆಯ ಶಿಕ್ಷಕರಿಗೆ 10 ಸಾವಿರ, ಪ್ರೌಢ ಶಿಕ್ಷಕರಿಗೆ 10,500 ಹಾಗೂ ಪದವಿಪೂರ್ವ ಕಾಲೇಜು ಉಪನ್ಯಾಸಕರಿಗೆ 12,000 ಸಾವಿರ ಗೌರವ ಸಂಭಾವನೆಯನ್ನು ನೀಡಲಾಗುತ್ತಿದ್ದು, ಈ ಸಂಭಾವನೆಯಲ್ಲಿ ತಲಾ 2 ಸಾವಿರ ರೂಪಾಯಿ ಹೆಚ್ಚಳ ಮಾಡಲಾಗಿದೆ.
ಹಾಲಿ ಗೌರವ ಸಂಭಾವನೆಯನ್ನು ಪರಿಷ್ಕರಿಸಿ ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರುಗಳಿಗೆ ರೂ.12,000 ಸಾವಿರ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿನ ಅತಿಥಿ ಶಿಕ್ಷಕರುಗಳಿಗೆ ರೂ.12,500 ಗಳ ಗೌರವ ಸಂಭಾವನೆ ಹಾಗೂ ಪದವಿಪೂರ್ವ ಕಾಲೇಜು ಉಪನ್ಯಾಸಕರ ಸಂಭಾವನೆಯನ್ನು 14,000 ರೂಗಳಿಗೆ ನಿಗದಿಪಡಿಸಲಾಗಿದೆ
2025-26 ಸಾಲಿನ ಬಜೆಟ್ ನಲ್ಲಿ ಘೋಷಿಸಿದಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲಾ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿನ ಅತಿಥಿ ಶಿಕ್ಷಕರು / ಅತಿಥಿ ಉಪನ್ಯಾಸಕರುಗಳಿಗೆ ಪುಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ ರೂ.2000 ಹೆಚ್ಚಳಕ್ಕೆ ಆರ್ಥಿಕ ಇಲಾಖೆಗೆ ತಿಳಿಸಲಾಗಿತ್ತು.