
ಬೆಂಗಳೂರು,ಮಾ.18: ಕಳೆದ ಸಾಲಿನ ಬಜೆಟ್ ನಲ್ಲಿ ಘೋಷಣೆ ಮಾಡಿದಂತೆ ಅಂಗನವಾಡಿ ಕಾರ್ಯಕರ್ತೆಯರಿಗೆ 1 ಸಾವಿರ ಹಾಗೂ ಅಂಗನವಾಡಿ ಸಹಾಯಕಿಯರಿಗೆ 750ರೂ ಗೌರವಧನ ಹೆಚ್ಚಳ ಮಾಡಲಾಗಿದೆ, ಮುಂದಿನ ದಿನಗಳಲ್ಲಿ ಕಾರ್ಯಕರ್ತೆಯರ ವೇತನವನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರೀಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.
ಅವರು ಬುಧವಾರ ವಿಧಾನಸಭೆಯ ಕಲಾಪದ ವೇಳೆ ಮೇಲುಕೋಟೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು ಜನರ ಹಾಗೂ ಸರ್ಕಾರದ ಕೊಂಡಿಯಾಗಿ ಕೆಲಸ ಮಾಡುತ್ತಿದ್ದಾರೆ, ಗ್ರಾಮ ಮಟ್ಟದಲ್ಲಿ ಸರ್ಕಾರದ ಕೆಲಸಗಳನ್ನು ಮಾಡಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತಂದುಕೊಡುತ್ತಿದ್ದಾರೆ.ಆದ್ದರಿಂದ ಇವರಿಗೆ ಸೇವಾ ಭದ್ರತೆ, ಆರೋಗ್ಯ ಭದ್ರತೆ ಹಾಗೂ ವೇತನವನ್ನು ಹೆಚ್ಚಳದ ಕುರಿತು ಸರ್ಕಾರ ಕೈಗೊಂಡಿರುವ ಕ್ರಮದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು,
ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರು ಗ್ರಾಮ ಮಟ್ಟದಲ್ಲಿ ಸರ್ಕಾರಕ್ಕೆ ಒಳ್ಳೆಯ ಹೆಸರನ್ನು ತಂದುಕೊಡುವ ನಿಟ್ಟಿನಲ್ಲಿ ಅತ್ಯುತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಆಶಾ ಕಾರ್ಯಕರ್ತೆಯರಿಗೆ ನೀಡುವ ವೇತನದಲ್ಲಿ ದೇಶದಲ್ಲೇ ಕರ್ನಾಟಕ ರಾಜ್ಯ 4ನೇ ಸ್ಥಾನದಲ್ಲಿದೆ ಎಂದರು. 2025-26ನೇ ಸಾಲಿನ ಆಯವ್ಯಯ ಘೋಷಣೆಯನ್ವಯ ಅಂಗನವಾಡಿ ಕಾರ್ಯಕರ್ತೆಯರಿಗೆ ರೂ.1000ಗಳು ಹಾಗೂ ಅಂಗನವಾಡಿ ಸಹಾಯಕಿಯರಿಗೆ ರೂ.750ಗಳನ್ನು ಹೆಚ್ಚಿಸಲಾಗಿರುತ್ತದೆ. ಮುಂದಿನ ದಿನಗಳಲ್ಲಿ ಕಾರ್ಯಕರ್ತೆಯರ ವೇತನವನ್ನು ಪರಿಷ್ಕರಿಸುವ ಕುರಿತು ಪರಿಶೀಲಿಸಲಾಗುವುದು ಎಂದು ತಿಳಿಸಿದರು.















.
.
.
.
.
.
.
.
.
.
