Share this news

ಬೆಂಗಳೂರು  ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಆಗಸ್ಟ್ 5 ರಿಂದ ನಾಲ್ಕು ಸಾರಿಗೆ ನಿಗಮಗಳ ನೌಕರರು  ಅನಿರ್ದಿಷ್ಟಾವಧಿ ಮುಷ್ಕರ  ಮಾಡಲು ನೌಕರರ ನಿರ್ಧರಿಸಿದ್ದಾರೆ. ಪ್ರತಿಭಟನೆಗೆ ಟಕ್ಕರ್ ಕೊಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಸಾರಿಗೆ ಇಲಾಖೆ  ಖಾಸಗಿ ಬಸ್ ಮಾಲೀಕರ ಅಸೋಸಿಯೇಷನ್ ಜೊತೆ ಇಂದು ಸಭೆ ಕರೆದಿದೆ.ಸಾರಿಗೆ ಆಯುಕ್ತ ಯೋಗೀಶ್ ನೇತೃತ್ವದಲ್ಲಿ ಇಂದು ಶಾಂತಿನಗರದ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಯಲಿದೆ. ಸಾರಿಗೆ ನೌಕರರು ಮುಷ್ಕರ ಕೈಗೊಂಡರೆ ಖಾಸಗಿ ಬಸ್ ಚಾಲಕರನ್ನು ಬಳಸಿಕೊಳ್ಳಲು ಪ್ಲ್ಯಾನ್ ಮಾಡಿದೆ.

ಈಗಾಗಲೇ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರು ಆ.5ರಿಂದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಅನಿರ್ಧಿಷ್ಠಾವಧಿ ಮುಷ್ಕರ ಆರಂಭಿಸುವುದಾಗಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಕಳೆದ 2020ರ ಜನವರಿ 1ರಿಂದ ಸಾರಿಗೆ ನೌಕರರ ವೇತನ ಶೇ 15ರಷ್ಟು ಹೆಚ್ಚಳವಾಗಿತ್ತು. ಆದರೆ, ವೇತನ ಪರಿಷ್ಕರಣೆ ನಂತರದ 38 ತಿಂಗಳ ಹಣವನ್ನು ಹಿಂಬಾಕಿ ಉಳಿಸಿಕೊಂಡಿದ್ದು, ಅದನ್ನು ಬಿಡುಗಡೆ ಮಾಡಬೇಕು. ಜೊತೆಗೆ, 2023ರ ಡಿಸೆಂಬರ್ 31ರಂದು ಇದ್ದ ಮೂಲ ವೇತನದಲ್ಲಿ ಶೇ.31ರಷ್ಟು ತುಟ್ಟಿ ಭತ್ಯೆ ವಿಲೀನಗೊಳಿಸಿ, 2024ರ ಜನವರಿ 1ರಿಂದ ಅನ್ವಯವಾಗುವಂತೆ ಶೇ 25ರಷ್ಟು ವೇತನ ಹೆಚ್ಚಿಸಬೇಕು. ಕಳೆದ ಏಪ್ರಿಲ್ ತಿಂಗಳಲ್ಲಿ ಸರ್ಕಾರದಿಂದ ನೀಡಲಾಗಿದ್ದ ಭರವಸೆಗಳನ್ನು ಈಗಲೇ ಈಡೇರಿಸಬೇಕು. ಈಬಾರಿಯ ಮುಷ್ಕರ ಕೇವಲ ಭರವಸೆಗಳಿಗೆ ಬಗ್ಗೊಲ್ಲ, ನಮ್ಮ ಬೇಡಿಕೆ ಈಡೇರುವವರೆಗೂ ನಾವು ಹಿಂದೆ ಸರಿಯಲ್ಲ ಎಂದು ನೌಕರರು ಆಗ್ರಹ ಮಾಡಿದ್ದಾರೆ.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *