Share this news

ಕಾರ್ಕಳ, ಆ 15: ಲಕ್ಷಾಂತರ ದೇಶಪ್ರೇಮಿಗಳ ತ್ಯಾಗ,ಬಲಿದಾನಗಳಿಗೆ ನಾವು ಧನ್ಯವಾದ ಹೇಳುವ ಅವರ ಚಿರಸ್ಮರಣೆಗೈಯ್ಯುವ ಶುಭದಿನ ಸ್ವಾತಂತ್ರ್ಯವೆನ್ನುವುದು ಉಚಿತವಾಗಿ ದೊರೆತುದಲ್ಲ. ಅದೊಂದು ಜವಾಬ್ದಾರಿಯ ಸಂಕೇತ ಎಂದು ಪದ್ಮಶ್ರೀ ಡಾ.ಎಂ.ಎಂ.ಜೋಷಿ ಸೇವಾಪ್ರಶಸ್ತಿ ಪುರಸ್ಕೃತ ನೇತ್ರತಜ್ಞ ಡಾ.ಶ್ರೀನಿವಾಸ್ ದೇಶಪಾಂಡೆ ಹೇಳಿದರು.

ಅವರು ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಜರುಗಿದ 79ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

ಕಾರ್ಯಕ್ರಮದಲ್ಲಿ ಸಂಸ್ಥೆಯ ಪಿ.ಆರ್.ಒ ಜ್ಯೋತಿ ಪದ್ಮನಾಭ್ ಭಂಡಿ, ಪಿ.ಯು. ಉಪಪ್ರಾಂಶುಪಾಲರುಗಳಾದ ಶ್ರೀ ಸಾಹಿತ್ಯ, ಉಷಾ ರಾವ್‌ಯು, ಜ್ಞಾನಸುಧಾ ಆಂಗ್ಲಮಾಧ್ಯಮಪ್ರೌಢಶಾಲಾ ಉಪಪ್ರಾಂಶುಪಾಲೆ ವಾಣಿ ಕೆ, ಲೆಫ್ಟಿನೆಂಟ್ ಮಂಜುನಾಥ್ ಮುದೂರ್, ದೈಹಿಕ ಶಿಕ್ಷಣ ನಿರ್ದೇಶಕರಾದ ಸೌಜನ್ಯ ಹೆಗ್ಡೆ, ರೇಶ್ಮಾ ಸಾಲಿಸ್, ಕಿರಣ್‌ಕುಮಾರ್ ಮತ್ತು ದರ್ಶನ್‌ಕುಮಾರ್ ಉಪಸ್ಥಿತರಿದ್ದರು.

ಕಾರ್ಕಳ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಮುಖ್ಯಕಾರ್ಯನಿರ್ವಹಣಾಧಿಕಾರಿ ಹಾಗೂ ಪ್ರಾಂಶುಪಾಲ ದಿನೇಶ್ ಎಂ ಕೊಡವೂರ್ ವಂದಿಸಿ, ಜೀವಶಾಸ್ರ್ತ ಉಪನ್ಯಾಸಕ ಪ್ರಸಾದ್ ಆಚಾರ್ಯ ನಿರೂಪಿಸಿ ಸ್ವಾಗತಿಸಿದರು.

ಉಡುಪಿ ಜ್ಞಾನಸುಧಾ ಪದವಿಪೂರ್ವ ಕಾಲೇಜಿನಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು.
ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಅಧ್ಯಕ್ಷರಾದ ಡಾ. ಸುಧಾಕರ ಶೆಟ್ಟಿಯವರು ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು. ವಿದ್ಯಾರ್ಥಿ ಜೀವನದಲ್ಲಿ ಶಿಸ್ತು ಬಹಳ ಮುಖ್ಯ. ಹೆತ್ತವರಿಗೆ ಉತ್ತಮ ಮಗನಾಗಿ, ದೇಶಕ್ಕೆ ಉತ್ತಮ ಪ್ರಜೆಯಾದರೆ ಜನ್ಮ ಸಾರ್ಥಕವಾಗುವುದು. ಈ ದಿನ ದೇಶಕ್ಕಾಗಿ ಪ್ರಾಣಾರ್ಪಣೆಗೈದ ವೀರಯೋಧರನ್ನು ಸ್ಮರಿಸಿಕೊಳ್ಳುವ ವಿಶೇಷ ದಿನವಾಗಲಿ ಎಂದರು.

ಈ ಸಂದರ್ಭದಲ್ಲಿ ಕಮಲಾಬಾಯಿ ಪ್ರೌಢಶಾಲೆ ಕಡಿಯಾಳಿ ಇಲ್ಲಿಯ ನಿವೃತ್ತ ಮುಖ್ಯೋಪಾಧ್ಯಾಯರಾದ ಸುದರ್ಶನ್, ಕಾಲೇಜಿನ ಪ್ರಾಂಶುಪಾಲರಾದ ಸಂತೋಷ್ ಉಪ ಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಮತ್ತಿತರರು ಉಪಸ್ಥಿತರಿದ್ದರು.

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

 

 

 

 

 

  

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *