ನವದೆಹಲಿ:ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಮೂಲಕ ಉಗ್ರರ 9 ಅಗಡುದಾಣಗಳ ಮೇಲೆ ಭೀಕರ ವಾಯುದಾಳಿ ನಡೆಸಿದ ಕೇವಲ ಎರಡೇ ದಿನಗಳಲ್ಲಿ ಪಾಕಿಸ್ತಾನಕ್ಕೆ ಭಾರೀ ಹೊಡೆತ ನೀಡಿದೆ. ಭಾರತೀಯ ವಾಯುಸೇನೆ ಗುರುವಾರ ಮಧ್ಯಾಹ್ನ ಲಾಹೋರ್ ನಗರದಲ್ಲಿನ ಚೀನಾ ನಿರ್ಮಿತ ಎಚ್ಕ್ಯು-9 ಏರ್ ಡಿಫೆನ್ಸ್ ಸಿಸ್ಟಂ ವ್ಯವಸ್ಥೆಯನ್ನು ಸಂಪೂರ್ಣವಾಗಿ ನಾಶಪಡಿಸಿದೆ. ಎಚ್ಕ್ಯು-9 ಏರ್ ಡಿಫೆನ್ಸ್ ಸಿಸ್ಟಂ ಮೇಲ್ಮೈಯಿಂದ ಆಕಾಶಕ್ಕೆ ಹಾರುವ ಕ್ಷಿಪಣಿ ವ್ಯವಸ್ಥೆಯಾಗಿದ್ದು, ಇದನ್ನು ಪಾಕಿಸ್ತಾನದ ಬಹು-ಪದರದ ವಾಯು ರಕ್ಷಣಾ ಜಾಲದ ಪ್ರಮುಖ ಅಸ್ತçವಾಗಿತ್ತು.
ಬುಧವಾರ ರಾತ್ರಿ ಪಾಕಿಸ್ತಾನವು ಉತ್ತರ ಮತ್ತು ಪಶ್ಚಿಮ ಭಾರತದ ಅವಂತಿಪುರ, ಶ್ರೀನಗರ, ಜಮ್ಮು, ಪಠಾಣ್ಕೋಟ್, ಅಮೃತಸರ, ಕಪುರ್ತಲಾ, ಜಲಂಧರ್, ಲುಧಿಯಾನ, ಆದಂಪುರ, ಭಟಿಂಡಾ, ಚಂಡೀಗಢ, ನಲ್, ಫಲೋಡಿ, ಉತ್ತರಲೈ ಮತ್ತು ಭುಜ್ ಸೇರಿದಂತೆ ಹಲವಾರು ಮಿಲಿಟರಿ ನೆಲೆಗಳ ಮೇಲೆ ಡ್ರೋನ್ಗಳು ಮತ್ತು ಕ್ಷಿಪಣಿಗಳನ್ನು ಬಳಸಿ ದಾಳಿ ಮಾಡಲು ಪ್ರಯತ್ನಿಸಿತು. ಇವುಗಳನ್ನು ಇಂಟಿಗ್ರೇಟೆಡ್ ಕೌಂಟರ್ ಯುಎಎಸ್ ಗ್ರಿಡ್ ಮತ್ತು ವಾಯು ರಕ್ಷಣಾ ವ್ಯವಸ್ಥೆಗಳು ವಿಫಲಗೊಳಿಸಿವೆ.