Share this news

 

 

 

ಬಂಡಿಪೋರಾ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎನ್‌ಕೌಂಟರ್‌ನಲ್ಲಿ ಲಷ್ಕರ್-ಎ-ತೊಯ್ಬಾ (ಎಲ್‌ಇಟಿ) ಟಾಪ್ ಕಮಾಂಡರ್ ಅಲ್ತಾಫ್ ಲಲ್ಲಿ ಸಾವನ್ನಪ್ಪಿದ್ದಾನೆ.  ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದರು. ಈ ದಾಳಿ ಹೊಣೆಯನ್ನು ಲಷ್ಕರ್​-ಎ-ತೊಯ್ಬಾ ಹೊತ್ತುಕೊಂಡಿತ್ತು. ಇದೀಗ ಭಾರತೀಯ ಸೇನೆ ಬಹುದೊಡ್ಡ ಬೇಟೆಯನ್ನೇ ಆಡಿದ್ದು, ಟಾಪ್​ ಕಮಾಂಡರ್​ ಅಲ್ತಾಫ್​ನನ್ನು ಹತ್ಯೆ ಮಾಡಿವೆ.

ಏಪ್ರಿಲ್ 22 ರಂದು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟ ಹಿನ್ನೆಲೆಯಲ್ಲಿ, ಉಗ್ರರನ್ನು ಸೆದೆಬಡಿಯುವ ಕೆಲಸದಲ್ಲಿ ಭಾರತೀಯ ಸೇನೆ ನಿರತವಾಗಿದೆ. ನಿರಂತರವಾಗಿ ಕಾರ್ಯಾಚರಣೆ ನಡೆಯುತ್ತಿದ್ದು, ಇಂದು ಬೆಳಗ್ಗೆ ಲಷ್ಕರ್-ಎ-ತೋಯ್ಬಾ (ಎಲ್‌ಇಟಿ) ಸಂಘಟನೆಯ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿಯನ್ನು ಹೊಡೆದುರುಳಿಸಲಾಗಿದೆ.

ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿ ಸಿಕ್ಕ ಮೇರೆಗೆ, ಭಾರತೀಯ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಶುಕ್ರವಾರ ಬೆಳಗ್ಗೆ ಬಂಡಿಪೋರಾದಲ್ಲಿ ಜಂಟಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿದರು. ಈ ವೇಳೆ ಭಯೋತ್ಪಾದಕರು ಇರುವ ಜಾಗವನ್ನು ಪತ್ತೆಹಚ್ಚಲಾಯಿತು. ಬಳಿಕ ಗುಂಡಿನ ಚಕಮಕಿ ನಡೆದು, ಎಲ್​ಇಟಿ ಕಮಾಂಡರ್​ನ್ನು ಹೊಡೆದುರುಳಿಸಲಾಯಿತು.

 

 

 

 

 

 

 

 

 

Leave a Reply

Your email address will not be published. Required fields are marked *