Share this news

ನಹದೆಹಲಿ: ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ 11ನೇ ಬಾರಿಗೆ ಪ್ರಧಾನಿಯಾಗಿ ಧ್ವಜಾರೋಹಣ ನೇರವೆರಿಸಿ ದೇಶದ ಜನತೆಗೆ 78ನೇ ಸ್ವಾತಂತ್ರ‍್ಯ ದಿನಾಚರಣೆಯ ಶುಭಾಶಯ ಕೋರಿದ್ದಾರೆ. ಇದೇ ವೇಳೆ ದೇಶವನ್ನು ತಮ್ಮ ಕಠಿಣ ಪರಿಶ್ರಮದ ಮೂಲಕ ಸಮರ್ಥವಾಗಿ ಮುನ್ನಡೆಸುತ್ತಿರುವ ಯೋಧರು, ರೈತರು ಯುವ ಸಮೂಹ ಸೇರಿದಂತೆ ಎಲ್ಲಾ ವರ್ಗದ ಜನರಿಗೆ ಮೋದಿ ಸಲಾಂ ಹೇಳಿದ್ದಾರೆ.

ಕೆಂಪು ಕೋಟೆಯಲ್ಲಿ ದೇಶವನ್ನುದ್ದೇಶಿ ಮಾತನಾಡಿ ಮೋದಿ, ಈ ಬಾರಿಯ ಪ್ರಾಕೃತಿಕ ವಿಕೋಪದಲ್ಲಿ ಹಲವರು ಜೀವ ಕಳೆದುಕೊಂಡಿದ್ದಾರೆ. ಈ ಸ್ವಾತಂತ್ರ‍್ಯ ದಿನಾಚರಣೆ ಸಂದರ್ಭದಲ್ಲಿ ನಾನು ಆ ಕುಟಂಬಕ್ಕೆ ಸಂತಾಪ ಸೂಚಿಸುತ್ತಾ, ಅವರ ಕುಟುಂಬದ ಜೊತೆ ನಾವಿದ್ದೇವೆ ಎಂದು ಭರವಸೆ ನೀಡುತ್ತಿದ್ದೇನೆ ಎಂದರು.
40 ಕೋಟಿ ಭಾರತೀಯರು ಒಗ್ಗಟ್ಟಾಗಿ ಹೋರಾಡಿದ ದೇಶವನ್ನು ಸ್ವಾತಂತ್ರ‍್ಯಗೊಳಿಸಿತು. ಬ್ರಿಟಿಷ್ ಆಡಳಿತದಿಂದ ದೇಶ ಮುಕ್ತಿಗೊಂಡಿತು. ಇದೀಗ 140 ಕೋಟಿ ದೇಶ ನಮ್ಮದು. ಶಕ್ತಿಶಾಲಿ ಭಾರತ ಇದೀಗ ಅಸಾಧ್ಯವಾದದ್ದನ್ನೂ ಸಾಧಿಸುವ ತೋರಿಸುವ ಸಾಮರ್ಥ್ಯ ಹೊಂದಿದೆ. ಅಂದು 40 ಕೋಟಿ ಜನ ದೇಶಕ್ಕೆ ಸ್ವಾತಂತ್ರ‍್ಯ ತಂದುಕೊಡಲು ಹೋರಾಡಿದರು. ಇದೀಗ 140 ಕೋಟಿ ಜನರು ಈ ದೇಶವನ್ನು ಮತ್ತಷ್ಟು ಅಭಿವೃದ್ಧಿ ಹಾಗೂ ಶಕ್ತಿಶಾಲಿ ದೇಶವನ್ನಾಗಿ ಮಾಡಲು ಶ್ರಮಿಸುತ್ತಿದ್ದಾರೆ ಎಂದು ಮೋದಿ ಹೇಳಿದ್ದಾರೆ.

2047ರ ವೇಳೆಗೆ ಭಾರತವನ್ನು ಅಭಿವೃದ್ಧಿ ದೇಶ ಮಾಡಲು ನಾಗರೀಕರು ಹಲವು ಸಲಹೆಗಳನ್ನು ನೀಡಿದ್ದಾರೆ. ಭಾರತವನ್ನು ಉತ್ಪಾದನಾ ಹಬ್ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸಶಕ್ತಗೊಳಿಲು ಮಹತ್ವದ ಸಲಹೆ ನೀಡಿದ್ದಾರೆ. ಭಾರತ ಸರ್ಕಾರ ಈ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಿದೆ ಎಂದು ಮೋದಿ ಹೇಳಿದ್ದಾರೆ. ನಮ್ಮ ದೇಶ ಹೊಸ ಆತ್ಮವಿಶ್ವಾಸದಲ್ಲಿದೆ. ನಮ್ಮ ಯುವ ಸಮೂಹ ಉನ್ನತಿಗೆ ಶ್ರಮಿಸುತ್ತಿದೆ. ಇವರಿಗೆ ಪೂರಕವಾದ ವಾತಾವರಣ ನಿರ್ಮಾಣ ಮಾಡಲು ಸರ್ಕಾರ ಕಾರ್ಯನಿರ್ವಹಿಸುತ್ತಿದೆ. ನಾಗರೀಕರ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ನಮ್ಮ ಸರ್ಕಾರ ಪ್ರಮುಖ ಆದ್ಯತೆ ನೀಡಿದೆ. ಇಂದು ಸಮಾಜದಲ್ಲಿ ವಿಶ್ವಾಸ ತುಂಬಿಕೊAಡಿದೆ. ಎಲ್ಲರು ಜೊತೆಯಾಗಿ ಭಾರತ ದೇಶವನ್ನು ಮುನ್ನಡೆಸಲಿದ್ದಾರೆ. ಜಾಗತಿಕ ಅಭಿವೃದ್ಧಿಯಲ್ಲಿ ಭಾರತದ ಕೂಡುಗೆ ಮಹತ್ವವಾಗಿದೆ. ಭಾರತದ ರಫ್ತು, ಭಾರತದ ಉತ್ಪಾದನೆ, ಹೂಡಿಕೆ ಹೆಚ್ಚಾಗಿದೆ. ಇದೀಗ ವಿಶ್ವವೇ ಭಾರತದತ್ತ ತಿರುಗಿ ನೋಡುತ್ತಿದೆ ಎಂದರು.

 

 

 

                        

                          

                        

                          

 

`

Leave a Reply

Your email address will not be published. Required fields are marked *