
ಅಹಮದಾಬಾದ್, ಮಾ.8: ಈ ಬಾರಿಯT20 ವಿಶ್ವಕಪ್ ಕ್ರಿಕೆಟ್ ಫೈನಲ್ ನಲ್ಲಿ ಬಲಿಷ್ಠ ನ್ಯೂಜಿಲೆಂಡ್ ತಂಡವನ್ನು ಬಗ್ಗುಬಡಿದು ವಿಶ್ವಕಪ್ ಟ್ರೋಫಿ ಗೆದ್ದುಕೊಂಡಿದೆ.
ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ ಇಳಿಸಲ್ಪಟ್ಟ ಟೀಮ್ ಇಂಡಿಯಾದ ಅದ್ಭುತ ಬ್ಯಾಟಿಂಗ್ ಪರಿಣಾಮವಾಗಿ 255 ಬೃಹತ್ ಮೊತ್ತ ಕಲೆ ಹಾಕಿತು.
ಭಾರತ ನೀಡಿದ ಬೃಹತ್ ಮೊತ್ತವನ್ನು ಬೆನ್ನತ್ತಿದ ಕಿವೀಸ್ 10ನೇ ಓವರ್ ತನಕ ಉತ್ತಮ ಸ್ಥಿತಿಯಲ್ಲಿತ್ತು. ಬಳಿಕ ಹಠಾತ್ ಕುಸಿತ ಕಂಡು 159 ರನ್ನಿಗೆ ಅಲೌಟ್ ಆಯಿತು.ಇದರೊಂದಿಗೆ ಚೊಚ್ಚಲ ಬಾರಿಗೆ ಟ್ರೊಫಿ ಗೆಲ್ಲುವ ಸ್ಯಾಂಟ್ನರ್ ಪಡೆಯ ಕನಸು ಭಗ್ನಗೊಂಡಿದೆ.
ಈ ಟ್ರೋಫಿ ಗೆಲ್ಲುವ ಮೂಲಕ ಭಾರತ T20 ಕ್ರಿಕೆಟ್ ಪಂದ್ಯದಲ್ಲಿ ಮೂರನೇ ಬಾರಿಗೆ ಕಪ್ ಗೆದ್ದು ಇತಿಹಾಸ ನಿರ್ಮಿಸಿದೆ.


.
.
.
.
.
.
.
.
.
.
