ಕಾರ್ಕಳ: ಕಾರ್ಕಳದ ಕ್ರಿಯೇಟಿವ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಿಳಾ ಕಲ್ಯಾಣ ಸಂಘದ ವತಿಯಿಂದ ಮಹಿಳಾ ಆರೋಗ್ಯ ಮತ್ತು ಶುಚಿತ್ವ ಎಂಬ ಕಾರ್ಯಕ್ರಮದಡಿ ಎಲ್ಲಾ ವಿದ್ಯಾರ್ಥಿನಿಯರಿಗೆ ಮಾಹಿತಿ ಕಾರ್ಯಕ್ರಮ ಜರುಗಿತು.
ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಡಾ. ಅಕ್ಷತಾ ನಾಯಕ್ ಮಾತನಾಡಿ, ಆರೋಗ್ಯ ಮತ್ತು ಶುಚಿತ್ವ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಶುಚಿತ್ವ ಇರುವಲ್ಲಿ ಆರೋಗ್ಯ ಇರುತ್ತದೆ. ವಿದ್ಯಾರ್ಥಿನಿಯರು ಮೂಢನಂಬಿಕೆಗಳಿAದ ದೂರವಿದ್ದು, ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳುವ ಮೂಲಕ ಆರೋಗ್ಯ ಕಾಯ್ದುಕೊಳ್ಳಬೇಕು ಎಂದು
ಆರೋಗ್ಯ ಮತ್ತು ಶುಚಿತ್ವದ ಕುರಿತು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕಿಯರಾದ ರಶ್ಮಿ ರಾವ್, ಮನಿಷಾ, ಜ್ಯೋತಿ, ಸ್ಮಿತಾ, ಸುದೀಕ್ಷಾ ಶೆಣೈ, ವಿದ್ಯಾರ್ಥಿನಿಯರು, ವಸತಿ ನಿಲಯ ಪಾಲಕರು ಹಾಗೂ ಮೇಲ್ವಿಚಾರಕರು, ಇತರ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.
ಆಂಗ್ಲ ಭಾಷಾ ಉಪನ್ಯಾಸಕಿ ರಶ್ಮಿ ರಾವ್ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.