ಬೆಂಗಳೂರು :ವಿದ್ಯುತ್ ಸ್ಮಾರ್ಟ್ ಮೀಟರ್ ಅಳವಡಿಕೆ ಹಗರಣ ರಾಜ್ಯ ಕಾಂಗ್ರೆಸ್ ಪಕ್ಷದ 60 ಪರ್ಸೆಂಟ್ ಸರ್ಕಾರದ ಅತಿ ದೊಡ್ಡ ಹಗರಣವಾಗಿದೆ ಎಂದು ಮಾಜಿ ಸಚಿವ ಸುನಿಲ್ ಕುಮಾರ್ ಗಂಭೀರ ಆರೋಪ ಮಾಡಿದ್ದಾರೆ.
ಸ್ಮಾರ್ಟ್ ಮೀಟರ್ ಕುರಿತು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರ ಸ್ಪಷ್ಟನೆ ಕುರಿತು ಪ್ರತಿಕ್ರಿಯಿಸಿದ ಸುನಿಲ್ ಕುಮಾರ್, ಜಾರ್ಜ್ ಅವರೇ ನೀವು ಎಷ್ಟೇ ಸ್ಪಷ್ಟೀಕರಣ ನೀಡಿದರೂ ಈ ಹಗರಣವನ್ನು ಮುಚ್ಚಿ ಹಾಕಲು ಸಾಧ್ಯವೇ ಇಲ್ಲ,ಇದು ಇಂಧನ ಇಲಾಖೆಯಲ್ಲಿ ನಡೆದ ಅತಿದೊಡ್ಡ ಹಗರಣವಾಗಿದೆ ಎಂದಿದ್ದಾರೆ ದೇಶದ ಯಾವುದೇ ರಾಜ್ಯದಲ್ಲಿ ತಲಾ ಒಂದು ಸ್ಮಾರ್ಟ್ ಮೀಟರ್ ಅಳವಡಿಕೆಗೆ 9200 ರೂ ನಿಗದಿ ಮಾಡಿದ ಉದಾಹರಣೆಯೇ ಇಲ್ಲ. ಇದು ಜನರ ಮೇಲೆ ಹೇರುತ್ತಿರುವ ಬೆಲೆ ಏರಿಕೆಯ ನೇರ ಬರೆಯಾಗಿದೆ ಎಂದು ಟೀಕಿಸಿದ್ದಾರೆ.
ಸಚಿವ ಜಾರ್ಜ್ ಅವರ ಇಲಾಖೆಯಲ್ಲಿ ನಡೆದ ಅವ್ಯವಹಾರವನ್ನು ಮುಚ್ಚಿಡುವುದಕ್ಕೆ ಸಾಧ್ಯವೇ ಇಲ್ಲ.ಕಪ್ಪು ಪಟ್ಟಿಗೆ ಸೇರಿದ ಕಂಪನಿಯನ್ನು ನೀವು ಸಮರ್ಥಿಸಿಕೊಳ್ಳುವುದು ಗಮನಿಸಿದರೆ ‘ಕುಂಬಳ ಕಾಯಿ ಕಳ್ಳ’ ನ ಕಥೆಯಂತಾಗಿದೆ ಎಂದು ವ್ಯಂಗ್ಯವಾಡಿದ್ದಾರೆ.
ಮಾತ್ರವಲ್ಲದೇ ಅನರ್ಹ ಕಂಪನಿಗೆ ಕರ್ನಾಟಕ ಪಾರದರ್ಶಕ ಕಾಯ್ದೆಯ ಎಲ್ಲಾ ನಿಯಮ ಉಲ್ಲಂಘಿಸಿ ನೀಡಿದ ಟೆಂಡರ್ ನ್ನು ತಕ್ಷಣ ರದ್ದುಪಡಿಸುವಂತೆ ಅವರು ಆಗ್ರಹಿಸಿದ್ದಾರೆ.
K