ಬೆಂಗಳೂರು:ಸದಾ ಕರ್ತವ್ಯದ ಒತ್ತಡ ಹಾಗೂ ಸಂದಿಗ್ಧ ಪರಿಸ್ಥಿತಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಪೊಲೀಸರಿಗೆ ವರ್ಗಾವಣೆ ವಿಚಾರದಲ್ಲಿ ಸರ್ಕಾರ ಸಿಹಿಸುದ್ದಿ ನೀಡಿದೆ. ಒಂದು ಜಿಲ್ಲೆಯಿಂದ ಮತ್ತೊಂದು ಜಿಲ್ಲೆಗೆ ವರ್ಗಾವಣೆ ಬಯಸುವ ಪೊಲೀಸ್ ಸಿಬ್ಬಂದಿಗಳ ಅಂತರ್ ಜಿಲ್ಲಾ ವರ್ಗಾವಣೆಗೆ ಸರ್ಕಾರ ಅನುಮತಿ ನೀಡಿದೆ.
ಈ ಕುರಿತು ಪತ್ರಕರ್ತರ ಜತೆ ಮಾಹಿತಿ ಹಂಚಿಕೊಂಡ ಗೃಹ ಸಚಿವ ಡಾ.ಜಿ ಪರಮೇಶ್ವರ್, ರಾಜ್ಯದಲ್ಲಿನ ಪೊಲೀಸ್ ಸಿಬ್ಬಂದಿಗಳನ್ನು ಅಂತರ್ ಜಿಲ್ಲಾ ವರ್ಗಾವಣೆಗೆ ಅವಕಾಶ ನೀಡುವಂತೆ ಸೂಕ್ತ ಕ್ರಮ ಕೈಗೊಳ್ಳುವಂತೆ ಡಿಜಿ, ಐಜಿಪಿಗೆ ಸೂಚಿಸಲಾಗಿದೆ ಎಂದರು.
ಅರ್ಹ ಪೊಲೀಸ್ ಸಿಬ್ಬಂದಿಗಳನ್ನು ಪತಿ-ಪತ್ನಿ ಪ್ರಕರಣ ಸೇರಿದಂತೆ ವಿವಿಧ ಕಾರಣಗಳಿಗೆ ಅಂತರ ಜಿಲ್ಲಾ ವರ್ಗಾವಣೆಗೆ ಕ್ರಮ ವಹಿಸುವಂತೆ ಡಿಜಿ, ಐಜಿಪಿ ಅಲೋಕ್ ಮೋಹನ್ ಅವರಿಗೆ ಗೃಹ ಸಚಿವ ರು ಸೂಚನೆ ನೀಡಿದ್ದಾರೆ
ಸರ್ಕಾರದ ಈ ಆದೇಶದಿಂದ
ಕೆಲವೇ ದಿನಗಳಲ್ಲಿ ಪತಿ-ಪತ್ನಿ ಪ್ರಕರಣದಲ್ಲಿ ಪೊಲೀಸರ ಅಂತರ ಜಿಲ್ಲಾ ವರ್ಗಾವಣೆ ಆರಂಭಗೊಳ್ಳಲಿದ್ದು, ಅಂತರ್ ಜಿಲ್ಲಾ ವರ್ಗಾವಣೆ ನಿರೀಕ್ಷೆಯಲ್ಲಿದ್ದವರಿಗೆ ಶುಭಸುದ್ದಿ ಸಿಕ್ಕಿದೆ.