Share this news

ನವದೆಹಲಿ: ಹರ್ಯಾಣ ಹಾಗೂ ಜಮ್ಮು ಕಾಶ್ಮೀರದಲ್ಲಿ ವಿಧಾನಸಭೆಗೆ ನಡೆದ ಚುನಾವಣೆಯ ಮತ ಎಣಿಕೆ ಕಾರ್ಯವು ಈಗಾಗಲೇ ಆರಂಭವಾಗಿದ್ದು, ಹರ್ಯಾಣದಲ್ಲಿ ಆರಂಭಿಕ ಹಂತದಲ್ಲಿ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್‌ಗೆ ಇದೀಗ ಮತ್ತೆ ಹಿನ್ನಡೆಯಾಗಿದ್ದು ಬಿಜೆಪಿಯು ಕಾಂಗ್ರೆಸ್‌ಗೆ ಸಮಬಲದ ಹೋರಾಟ ನೀಡಿ ಮುನ್ನಡೆ ಸಾಧಿಸಿದೆ.

ಆ ಮೂಲಕ ಹರ್ಯಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಏರಲಿದೆ ಎನ್ನುವ ಎಲ್ಲಾ ಸಮೀಕ್ಷೆಗಳು ತಲೆಕೆಳಗಾಗಿವೆ. ಇದರಂತೆ ಜಮ್ಮು ಕಾಶ್ಮೀರ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶದಲ್ಲೂ ಕೂಡ ಕಾಂಗ್ರೆಸ್‌ಗೆ ಬಿಜೆಪಿ ತೀವೃ ಸ್ಪರ್ಧೆ ನೀಡುತ್ತಿದ್ದು, ಅಂತಿಮವಾಗಿ ಕಾಂಗ್ರೆಸ್ ಹಾಗೂ ಬಿಜೆಪಿ ನಡುವಿನ ಜಿದ್ದಾಜಿದ್ದಿ ಫಲಿತಾಂಶದ ಬಳಿಕವಷ್ಟೇ ಸ್ಪಷ್ಟ ಚಿತ್ರಣ ಸಿಗಲಿದೆ.

ಹಿಂದಿನ ರಾಜ್ಯವನ್ನು ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಿದ ಐದು ವರ್ಷಗಳ ನಂತರ ಈ ಚುನಾವಣೆ ನಡೆಯುತ್ತಿದೆ. ಮುಖ ಪಕ್ಷಗಳಾದ ಕಾಂಗ್ರೆಸ್-ನ್ಯಾಷನಲ್ ಕಾನ್ಫರೆನ್ಸ್ (NC) ಮೈತ್ರಿ, ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ (PDP) ಮತ್ತು ಭಾರತೀಯ ಜನತಾ ಪಕ್ಷ (BJP). ಜಮ್ಮು ಮತ್ತು ಕಾಶ್ಮೀರದಲ್ಲಿ ಮೂರು ಹಂತಗಳಲ್ಲಿ ವಿಧಾನಸಭೆ ಚುನಾವಣೆ ನಡೆದಿದೆ. ಮೊದಲ ಹಂತದಲ್ಲಿ ಸೆಪ್ಟೆಂಬರ್ 18 ರಂದು 24 ಸ್ಥಾನಗಳಿಗೆ ಮತದಾನ ನಡೆದಿತ್ತು. ಎರಡನೇ ಹಂತದಲ್ಲಿ ಸೆಪ್ಟೆಂಬರ್ 25 ರಂದು 26 ಸ್ಥಾನಗಳಿಗೆ ಮತದಾನ ನಡೆಯಿತು. ಮೂರನೇ ಹಂತದಲ್ಲಿ ಅಕ್ಟೋಬರ್ 1 ರಂದು 40 ಸ್ಥಾನಗಳಿಗೆ ಮತದಾನ ನಡೆದಿತ್ತು. 

Leave a Reply

Your email address will not be published. Required fields are marked *