Share this news

ಕಾರ್ಕಳ: ಕೃಷಿ ಇಲಾಖೆ ವತಿಯಿಂದ ರಾಜ್ಯ ವಲಯ ಹೈಟೆಕ್ ಹಾರ್ವೆಸ್ಟರ್ ಹಬ್ ಯೋಜನೆಯಡಿ ಕಂಬೈನ್ಸ್ ಹಾರ್ವೆಸ್ಟರ್ ಹಬ್ ರಚನೆಗೆ ಆಸಕ್ತ ಫಲಾನುಭವಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಫಲಾನುಭವಿಗಳು ಅರ್ಜಿಯೊಂದಿಗೆ ಪಹಣಿ ಪತ್ರ, ಆಧಾರ್ ಪ್ರತಿ, ಬ್ಯಾಂಕ್ ಖಾತೆ ಪ್ರತಿ, ನಿಗಧಿತ ಮೊತ್ತದ ಛಾಪಾ ಕಾಗದದಲ್ಲಿ ಸಹಾಯದನದಲ್ಲಿ ರಚಿಸಿದ ಹಾರ್ವೆಸ್ಟರ್ ಹಬ್‌ನ್ನು ಪರಭಾರೆ ಮಾಡುವುದಿಲ್ಲ ಎಂಬ ಮುಚ್ಚಳಿಕೆ ಪತ್ರದೊಂದಿಗೆ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ದಿನಾಂಕ:20.08.2024 ಕೊನೆಯ ದಿನವಾಗಿದೆ.

ಕಂಬೈನ್ಸ್ ಹಾರ್ವೆಸ್ಟರ್ ಹಾಗೂ ಟ್ರ್ಯಾಕ್ಟರ್ ಚಾಲಿತ ಬೇಲರ್ ಉಪಕರಣವನ್ನು ಕಡ್ಡಾಯವಾಗಿ ಖರೀದಿಸಬೇಕು ಹಾಗೂ ಇವುಗಳೊಂದಿಗೆ ಹಾರ್ವೆಸ್ಟರ್ ಹಬ್‌ಗೆ ಅನುಮತಿಸಲಾದ ಇತರೆ ಉಪಕರಣಗಳನ್ನು ಸ್ಥಳಿಯ ಅವಶ್ಯಕತೆಗನುಗುಣವಾಗಿ ಖರೀದಿಸಬಹುದಾಗಿದೆ. ವೈಯಕ್ತಿಕ ಫಲಾನುಭವಿಗಳಿಗೆ ಪ್ರತಿ ಹಾರ್ವೆಸ್ಟರ್ ಹಬ್‌ಗೆ ಉಪಕರಣವಾರು ಗರಿಷ್ಟ ಮಿತಿಗೊಳಪಟ್ಟು ಶೇ.50ರ ಸಹಾಯಧನ ಅಥವಾ 40ಲಕ್ಷರೂ. ಮೀರದಂತೆ ಸಹಾಯಧನ ಕ್ರೆಡಿಟ್ ಲಿಂಕ್ಸ್ ಬ್ಯಾಂಕ್ ಎಂಡೆಡ್ ಸಬ್ಸಿಡಿ ಮುಖಾಂತರ ಒದಗಿಸಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿಗಳು ಅಥವಾ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ.

ಮೊಬೈಲ್ ಸಂಖ್ಯೆ: 8277932505

                        

                          

                        

                          

 

`

Leave a Reply

Your email address will not be published. Required fields are marked *