
ನವದೆಹಲಿ,ಏ.20: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಭಾರತದ ಎರಡು ಹಡಗುಗಳ ಮೇಲೆ ಏಕಾಏಕಿ ಗುಂಡಿನ ದಾಳಿ ನಡೆಸಿದೆ. ಈ ದಾಳಿಯಲ್ಲಿ ನಾಲ್ವರು ಭಾರತೀಯ ನಾವಿಕರು ಬಲಿಯಾಗಿದ್ದು, ಓರ್ವ ನಾವಿಕ ನಾಪತ್ತೆಯಾಗಿದ್ದಾರೆ ಎಂದು ಭಾರತದ ವಿದೇಶಾಂಗ ಇಲಾಖೆ ಮಾಹಿತಿ ನೀಡಿದೆ.
ಈ ದಾಳಿ ಭಾರತದ ಜಾಗರ್ನವ್ ಮತ್ತು ಸನ್ಮಾರ್ ಹೆರಾಲ್ಡ್ ಹಡಗುಗಳ ಮೇಲೆ ನಡೆದಿತ್ತು. ಅಮೆರಿಕಾ ಮತ್ತು ಇರಾನ್ ನಡುವೆ ಕದನ ವಿರಾಮ ಘೋಷಣೆಯಾಗಿ ಹಾರ್ಮುಜ್ ಜಲಸಂಧಿಯನ್ನು ವಾಣಿಜ್ಯ ಹಡಗುಗಳಿಗೆ ತೆರೆಯಲಾಗುವುದು ಎಂದು ಇರಾನ್ ಘೋಷಿಸಿದ ಕೆಲವೇ ಗಂಟೆಗಳಲ್ಲಿ ಈ ದಾಳಿ ನಡೆದಿದೆ. ಇರಾನ್‌ನ ವಿದೇಶಾಂಗ ಸಚಿವರೇ ಈ ಬಗ್ಗೆ ಹೇಳಿಕೆ ನೀಡಿದ್ದರೂ, ಭಾರತೀಯ ಧ್ವಜವಿದ್ದ ಹಡಗುಗಳ ಮೇಲೆ ದಾಳಿ ನಡೆದಿರುವುದು ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಭಾರತ ಸರ್ಕಾರ ಇರಾನ್ ರಾಯಭಾರಿಯನ್ನು ಕರೆಸಿ ಪ್ರತಿಭಟನೆ ದಾಖಲಿಸಿದೆ ಹಾಗೂ ದಾಳಿಯ ಉದ್ದೇಶದ ಬಗ್ಗೆ ಉತ್ತರಿಸುವಂತೆ ಆಗ್ರಹಿಸಿದೆ.



.
.
.
.
.
.
.
.
.
.
