ಬೆಂಗಳೂರು : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯಗೆ ರಾಜ್ಯಪಾಲರು ನೀಡಿರುವ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಎಂಟ್ರಿಕೊಟ್ಟಿದ್ದು, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿಗೆ ಪತ್ರ ಬರೆದಿದ್ದಾರೆ.
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದರ ವಿರುದ್ಧ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ನೀಡಿರುವ ದೂರಿಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರತಿಕ್ರಿಯಿಸಿದ್ದಾರೆ. ಇದರೊಂದಿಗೆ, ಸಿಎಂ ವಿರುದ್ಧದ ಪ್ರಾಸಿಕ್ಯೂಷನ್ ಪ್ರಕರಣದಲ್ಲಿ ರಾಷ್ಟ್ರಪತಿ ಕೂಡ ಎಂಟ್ರಿಯಾದಂತಾಗಿದೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವುದನ್ನು ಹಿಂತೆಗೆದುಕೊಳ್ಳುವಂತೆ ನಿರ್ದೇಶಿಸಲು ತಕ್ಷಣ ಮಧ್ಯಸ್ಥಿಕೆ ವಹಿಸಬೇಕು ಎಂದು ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ ರಮೇಶ್ ಬಾಬು ವಿನಂತಿ ಮಾಡಿದ್ದರು. ಇದಕ್ಕೆ ಪ್ರತಿಕ್ರಿಯಿಸಿ ಶಾಲಿನಿ ರಜನೀಶ್ಗೆ ಪತ್ರ ಬರೆದಿರುವ ರಾಷ್ಟ್ರಪತಿಗಳ ಕಾರ್ಯದರ್ಶಿ, ದಯವಿಟ್ಟು ಮೇಲೆ ತಿಳಿಸಿದ ವಿಷಯದ ಕುರಿತು ಭಾರತದ ರಾಷ್ಟ್ರಪತಿಗಳಿಗೆ ಸ್ವ-ವಿವರಣೆಯ ಮನವಿಯನ್ನು ಲಗತ್ತಿಸಿ. ಅರ್ಜಿಯ ಮೇಲೆ ತೆಗೆದುಕೊಂಡ ಕ್ರಮಗಳ ಬಗ್ಗೆ ಮಾಹಿತಿಯನ್ನು ನೇರವಾಗಿ ಅರ್ಜಿದಾರರಿಗೆ ನೀಡಬೇಕು ಎಂದು ಉಲ್ಲೇಖಿಸಲಾಗಿದೆ.