Share this news

ನವದೆಹಲಿ: ಇಡೀ ದೇಶಕ್ಕೆ ತುರ್ತು ಪರಿಸ್ಥಿತಿ ಹೇರಿ ಸಂವಿಧಾನ ನಾಗರಿಕರಿಗೆ ಕೊಡಮಾಡಿದ ಹಕ್ಕುಗಳನ್ನು ಮೊಟಕುಗೊಳಿಸಿದ ಕಾಂಗ್ರೆಸ್ ಗೆ ಸಂವಿಧಾನದ ಕುರಿತು ಮಾತನಾಡುವ ಹಕ್ಕಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಕಾಂಗ್ರೆಸ್ ವಿರುದ್ಧ ಎಕ್ಸ್ ನಲ್ಲಿ ತೀವ್ರ ವಾಗ್ದಾಳಿ ನಡೆಸಿದರು.
ನಾಗರಿಕರ ಮೂಲಭೂತ ಸ್ವಾತಂತ್ರ್ಯಗಳನ್ನು ನಾಶಪಡಿಸಿದವರಿಗೆ ಮತ್ತು ಭಾರತದ ಸಂವಿಧಾನವನ್ನು ತುಳಿದವರಿಗೆ ಸಂವಿಧಾನದ ಮೇಲಿನ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕಿಲ್ಲ ಎಂದು ಹೇಳಿದರು. ದೇಶದಲ್ಲಿ ತುರ್ತು ಪರಿಸ್ಥಿತಿಯನ್ನು ಹೇರಿದ ಮನಸ್ಥಿತಿ ಅದನ್ನು ಜಾರಿಗೆ ತಂದ ಪಕ್ಷದಲ್ಲಿ ಇನ್ನೂ ಜೀವಂತವಾಗಿದೆ, ದೇಶದ ಜನರು ಕಾಂಗ್ರೆಸ್ ಪಕ್ಷದ ವರ್ತನೆಗಳನ್ನು ನೋಡಿದ್ದಾರೆ ಮತ್ತು ಅದಕ್ಕಾಗಿಯೇ ಅವರು ಅವುಗಳನ್ನು ಮತ್ತೆ ಮತ್ತೆ ಅವರನ್ನು ತಿರಸ್ಕರಿಸಿದ್ದಾರೆ ಎಂದರು. “ತುರ್ತು ಪರಿಸ್ಥಿತಿ ಹೇರಿದವರಿಗೆ ನಮ್ಮ ಸಂವಿಧಾನದ ಬಗ್ಗೆ ಪ್ರೀತಿಯನ್ನು ವ್ಯಕ್ತಪಡಿಸುವ ಹಕ್ಕಿಲ್ಲ. ಹಲವಾರು ಸಂದರ್ಭಗಳಲ್ಲಿ ಕಾರಣವಿಲ್ಲದೇ 356ನೇ ವಿಧಿಯನ್ನು ಹೇರಿದರು, ಪತ್ರಿಕಾ ಸ್ವಾತಂತ್ರ್ಯವನ್ನು ನಾಶಪಡಿಸುವ ಮಸೂದೆಯನ್ನ ತಂದರು, ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸಿದರು ಮತ್ತು ಸಂವಿಧಾನದ ಪ್ರತಿಯೊಂದು ಅಂಶವನ್ನು ಉಲ್ಲಂಘಿಸಿದರು ಎಂದು ಪ್ರಧಾನಿ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

 

 

 

                        

                          

 

 

 

 

 

                        

                          

 

 

Leave a Reply

Your email address will not be published. Required fields are marked *