Share this news

ಬೆಂಗಳೂರು: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿಗಂಗಾವತಿ ಶಾಸಕ ಜನಾರ್ದನ ರೆಡ್ಡಿ  ದೋಷಿ ಎಂದು ಸಿಬಿಐ ಕೋರ್ಟ್ ತೀರ್ಪು ನೀಡಿ 7 ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಈ ಹಿನ್ನೆಲೆಯಲ್ಲಿ ಇದೀಗ ಜನಾರ್ದನ ರೆಡ್ಡಿ ಶಾಸಕ ಸ್ಥಾನವನ್ನು ಕಳೆದುಕೊಂಡಿದ್ದಾರೆ.

ಗಣಿಗಾರಿಕೆ ಪ್ರಕರಣ ಸುದೀರ್ಘ ವಿಚಾರಣೆ ನಡೆಸಿದ್ದ ಹೈದರಾಬಾದ್ ಸಿಬಿಐ ಕೋರ್ಟ್, ಏಳು ವರ್ಷಗಳ ಶಿಕ್ಷೆ ನೀಡಿ ತೀರ್ಪು ನೀಡಿತ್ತು.  ಶಾಸಕ ಸ್ಥಾನ ಉಳಿಸಿಕೊಳ್ಳಲು ಶಿಕ್ಷೆ ಕಡಿಮೆ ಮಾಡಿ ಎಂದು ರೆಡ್ಡಿ ಕೋರ್ಟ್​ ಮುಂದೆ  ಬೇಡಿಕೊಂಡಿದ್ದರು. ಆದರೆ ಕೋರ್ಟ್​ ರೆಡ್ಡಿ ಮನವಿಯನ್ನು ತಿರಸ್ಕರಿಸಿತ್ತು. ಇದರ ಬೆನ್ನಲ್ಲೇ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಲಾಗಿದೆ.ಈ ಕುರಿತು ಕರ್ನಾಟಕ ವಿಧಾನಸಭೆ ಕಾರ್ಯದರ್ಶಿ ವಿಶಾಲಾಕ್ಷಿ  ಆದೇಶ ಹೊರಡಿಸಿದ್ದಾರೆ.

ಸಿಬಿಐ ಕೋರ್ಟ್ ತೀರ್ಪು ಪ್ರಕಟವಾದ ತಕ್ಷಣದಿಂದಲೇ ಜಾರಿಗೆ ಬರುವಂತೆ ಜನಾರ್ದನ ರೆಡ್ಡಿ ಅವರನ್ನು ಶಾಸಕ ಸ್ಥಾನದಿಂದ ಮುಂದಿನ 6 ವರ್ಷಗಳ ಕಾಲ ಅನರ್ಹಗೊಳಿಸಿ ಕರ್ನಾಟಕ ವಿಧಾನಸಭೆ ಆದೇಶ ಹೊರಡಿಸಿದೆ. ಈ ಅನರ್ಹತೆ ಜನಾರ್ದನ ರೆಡ್ಡಿ ಶಿಕ್ಷೆ ಮುಗಿಸಿ ಬಿಡುಗಡೆಯಾಗುವವರೆಗೆ ಅಥವಾ ಈ ಶಿಕ್ಷೆಗೆ ಕೋರ್ಟ್ ತಡೆ ನೀಡುವವರೆಗೆ ಇರಲಿದೆ ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ. ನಿಮಯದ ಪ್ರಕಾರ ಯಾವುದೇ ಶಾಸಕ ಅಥವಾ ಸಂ ಸದ 2 ವರ್ಷ ಅಥವಾ ಅದಕ್ಕಿತಂ ಮೇಲ್ಪಟ್ಟು ಶಿಕ್ಷೆಗೆ ಗುರಿಯಾದರೆ ಶಾಸಕ ಸ್ಥಾನ ರದ್ದಾಗಲಿದೆ. ಅದರಂತೆ ಈಗ ರೆಡ್ಡಿ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದಾರೆ.

 

 

 

 

 

 

 

 

Leave a Reply

Your email address will not be published. Required fields are marked *