Share this news

ನವದೆಹಲಿ: ಜಾರ್ಖಂಡ್ ಮಾಜಿ ಮುಖ್ಯಮಂತ್ರಿ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ನಾಯಕ ಶಿಬು ಸೊರೆನ್ ಅವರು ಸೋಮವಾರ ನಿಧನರಾಗಿದ್ದಾರೆ.

ಮೂತ್ರಪಿಂಡ ಸಂಬAಧಿತ ಸಮಸ್ಯೆಯಿಂದ ಬಳಲುತ್ತಿದ್ದ ಸೊರೇನ್ ಅವರನ್ನು ಕಳೆದ ಜೂನ್ ತಿಂಗಳಲ್ಲಿ ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಯಿಸಲಾಗಿತ್ತು. ಸುಮಾರು ಒಂದು ತಿಂಗಳ ಕಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಇಹಲೋಕ ತ್ಯಜಿಸಿದ್ದಾರೆ. ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎA) ಸ್ಥಾಪಕ ಶಿಬು ಸೊರೆನ್ 38 ವರ್ಷಗಳ ಕಾಲ ಪಕ್ಷವನ್ನು ಮುನ್ನಡೆಸಿ, ಮೂರು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು.2005 ರಲ್ಲಿ ಮೊದಲ ಬಾರಿಗೆ 10 ದಿನಗಳ ಕಾಲ ಸೇವೆ ಸಲ್ಲಿಸಿದ್ದರೆ ನಂತರ 2008 ರಿಂದ 2009 ರವರೆಗೆ ಎರಡನೇ ಬಾರಿ ಮುಖ್ಯಮಂತ್ರಿಯಾದರೆ, 2009 ರಿಂದ 2010 ರವರೆಗೆ ಮೂರನೇ ಬಾರಿ ಮುಖ್ಯಮಂತ್ರಿಯಾಗಿ ರಾಜ್ಯವನ್ನು ಮುನ್ನಡೆಸಿದ್ದರು.
ಶಿಬು ಸೊರೇನ್ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಅಮಿತ್ ಷಾ ಸೇರಿದಂತೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

 

 

 

 

 

 

  

 

 

 

 

 

 

 

 

 

 

 

 

 

 

 

 

 

 

 

 

 

Leave a Reply

Your email address will not be published. Required fields are marked *