Share this news

ಉಡುಪಿ : ರಾಜ್ಯ ಹಾಗೂ ರಾಷ್ಟçಮಟ್ಟದಲ್ಲಿ ನೀಟ್, ಜೆ.ಇ.ಇ, ಕೆ.ಸಿ.ಇ.ಟಿ ಮೊದಲಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಅಮೋಘ ಸಾಧನೆ ಮಾಡಿರುವ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳಲ್ಲಿ, ಇದೀಗ ನೀಟ್ 2024ರ ಪರೀಕ್ಷೆ ಬರೆದು, ಎಂ.ಬಿ.ಬಿ.ಎಸ್ ಸೀಟು ಪಡೆಯುವಲ್ಲಿ ವಿಫಲರಾದ ಆಯ್ದ ಅರ್ಹ ವಿದ್ಯಾರ್ಥಿಗಳಿಗೆ ಒಂದು ವರ್ಷದ ಸಂಪೂರ್ಣ ಉಚಿತ ಅಥವಾ ಶೇ.50 ಶುಲ್ಕ ವಿನಾಯಿತಿಯೊಂದಿಗೆ ನೀಟ್ ಲಾಂಗ್ ಟರ್ಮ್ ತರಬೇತಿಯನ್ನು ನೀಡುವುದಾಗಿ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ.ಸುಧಾಕರ್ ಶೆಟ್ಟಿಯವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀಟ್ 2022ರಲ್ಲಿ 107 ವಿದ್ಯಾರ್ಥಿಗಳು ಹಾಗೂ ನೀಟ್ 2023ರಲ್ಲಿ 108 ವಿದ್ಯಾರ್ಥಿಗಳು ರಾಜ್ಯದ ವಿವಿಧ ಮೆಡಿಕಲ್ ಕಾಲೇಜುಗಳಲ್ಲಿ ಉಚಿತ ಎಂ.ಬಿ.ಬಿ.ಎಸ್. ಸೀಟು ಪಡೆದಿರುತ್ತಾರೆ.
ನೀಟ್ ಲಾಂಗ್‌ಟರ್ಮ್ಗೆ ದಾಖಲಾತಿ ಬಯಸುವ ಆಸಕ್ತ ವಿದ್ಯಾರ್ಥಿಗಳು  www.jnanasudha.com ಗೆ ಲಾಗಿನ್ ಆಗಿ ಹೆಸರು ನೊಂದಾಯಿಸಿಕೊಳ್ಳ ಬಹುದು. ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸ ಬಹುದು. 8762295555, 8147454891. ಮೊದಲು ನೊಂದಾಯಿಸಲ್ಪಟ್ಟ ವಿದ್ಯಾರ್ಥಿಗಳಿಗೆ ಆದ್ಯತೆ ನೀಡಲಾಗುವುದು.

 

 

 

 

 

 

 

 

 

                        

                          

 

Leave a Reply

Your email address will not be published. Required fields are marked *