
ಕಾರ್ಕಳ, ಫೆ.23: ಕಾರ್ಕಳ ಕಡೆಯಿಂದ ಜೋಡುರಸ್ತೆ ಕಡೆಗೆ ಅತೀ ವೇಗವಾಗಿ ಸಾಗುತ್ತಿದ್ದ ಮಾರುತಿ ಇಕೋ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಸೋಮವಾರ ಮಧ್ಯಾಹ್ನ ಸಂಭವಿಸಿದೆ.
ಕಾರು ಡಿಕ್ಕಿಯಾದ ರಭಸಕ್ಕೆ ವಿದ್ಯುತ್ ಕಂಬ ತುಂಡಾಗಿ ಕಾರಿನ ಮೇಲೆ ವಾಲಿದ್ದು, ಚಾಲಕ ಯಾವುದೇ ಗಾಯಗಳಿಲ್ಲದೇ ಪವಾಡಸದೃಶ ರೀತಿಯಲ್ಲಿ ಪಾರಾಗಿದ್ದಾರೆ.
ಕಾರಿನ ಟಯರಿಗೆ ಕಲ್ಲು ಬಡಿದ ಪರಿಣಾಮ ಟಯರ್ ಸ್ಪೋಟಗೊಂಡು ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.


.
.
.
.
.
.
.
.
.
.
