

ಬೆಂಗಳೂರು, ನ. 24: ಸುಪ್ರೀಂ ಕೋರ್ಟ್ ಕೊಲಿಜಿಯಂ ಮಂಗಳವಾರ (ನ.24) ನಡೆದ ಸಭೆಯಲ್ಲಿ ಇಬ್ಬರು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ವರ್ಗಾವಣೆಗೆ ಶಿಫಾರಸು ಮಾಡಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಅವರನ್ನು ಜಾರ್ಖಂಡ್ ಹೈಕೋರ್ಟ್ಗೆ ವರ್ಗಾಯಿಸಲು ಶಿಫಾರಸು ಮಾಡಲಾಗಿದ್ದು, ತ್ರಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎಂ.ಎಸ್. ರಾಮಚಂದ್ರ ರಾವ್ ಅವರನ್ನು ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನೇಮಿಸಲು ನಿರ್ಧರಿಸಲಾಗಿದೆ.
ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರ ನೇತೃತ್ವದಲ್ಲಿ ನವೆಂಬರ್ 24ರ ಮಂಗಳವಾರ ನಡೆದ ಸುಪ್ರೀಂ ಕೋರ್ಟ್ ಕೊಲಿಜಿಯಂ ಸಭೆಯಲ್ಲಿ ಈ ಮಹತ್ವದ ನಿರ್ಣಯಗಳನ್ನು ಕೈಗೊಳ್ಳಲಾಗಿದೆ.ಜಾರ್ಖಂಡ್ ಹೈಕೋರ್ಟ್ನ ಹಾಲಿ ಮುಖ್ಯ ನ್ಯಾಯಮೂರ್ತಿಗಳು ಇದೇ ನವೆಂಬರ್ 27ರಂದು ನಿವೃತ್ತಿ ಆಗುತ್ತಿರುವ ಹಿನ್ನೆಲೆಯಲ್ಲಿ, ತೆರವಾಗಲಿರುವ ಆ ಸ್ಥಾನಕ್ಕೆ ಕರ್ನಾಟಕ ಹೈಕೋರ್ಟ್ ಸಿಜೆ ನ್ಯಾ ವಿಭು ಬಖ್ರು ಅವರನ್ನು ವರ್ಗಾವಣೆ ಮಾಡಲು ಕೊಲಿಜಿಯಂ ಶಿಫಾರಸು ಮಾಡಿದೆ. ನ್ಯಾ ವಿಭು ಬಖ್ರು ಅವರು 2013ರಲ್ಲಿ ದೆಹಲಿ ಹೈಕೋರ್ಟ್ ನ ನ್ಯಾಯಮೂರ್ತಿಯಾಗಿ ನೇಮಕ ಆಗಿದ್ದರು. ಬಳಿಕ 2025ರಲ್ಲಿ ಕರ್ನಾಟಕ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಅಧಿಕಾರ ವಹಿಸಿಕೊಂಡಿದ್ದರು.
ಸುಪ್ರೀಂ ಕೋರ್ಟ್ ಕೊಲಿಜಿಯಂ ಮಾಡಿರುವ ಈ ಎಲ್ಲಾ ಶಿಫಾರಸುಗಳಿಗೆ ಕೇಂದ್ರ ಸರ್ಕಾರ ಅಂತಿಮ ಅನುಮೋದನೆ ನೀಡಿದ ಬಳಿಕ ರಾಷ್ಟ್ರಪತಿಗಳಿಂದ ಅಧಿಕೃತ ನೇಮಕಾತಿ ಮತ್ತು ವರ್ಗಾವಣೆ ಆದೇಶ ಹೊರಬೀಳಲಿದೆ. ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಹುದ್ದೆಗೆ ಶಿಫಾರಸುಗೊಂಡಿರುವ ಗೌರವಾನ್ವಿತ ನ್ಯಾಯಮೂರ್ತಿ ಮಾಮಿದಣ್ಣ ಸತ್ಯರತ್ನ ಶ್ರೀ ರಾಮಚಂದ್ರ ರಾವ್ ಅವರು ಸುದೀರ್ಘ ನ್ಯಾಯಾಂಗ ಅನುಭವ ಹಾಗೂ ಶೈಕ್ಷಣಿಕ ಸಾಧನೆಗಳನ್ನು ಹೊಂದಿದ್ದಾರೆ.






.
.
.
.
.
.
.
.
.
.
.
.
.
.
.
.
.
.
.
.
