ಹೆಬ್ರಿ:ತೋಟದಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲುಜಾರಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದಿದೆ.
ಹೆಬ್ರಿ ತಾಲೂಕಿನ ಕಬ್ಬಿನಾಲೆಯ ನೀರತೋಡ ನಿವಾಸಿ ಸುಬ್ಬ ರಾವ್ (75) ಮೃತಪಟ್ಟ ದುರ್ದೈವಿ. ಸುಬ್ಬ ರಾವ್ ಸೋಮವಾರ ತನ್ನ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ