Share this news

ಹೆಬ್ರಿ: ಹೆಬ್ರಿ ತಾಲೂಕಿನ ಕಬ್ಬಿನಾಲೆ ಗ್ರಾಮದ ತಲೆಮನೆ ಮದಗ ಎಂಬಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮರಳನ್ನು ಭಾನುವಾರ ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಭಾನುವಾರ ಮಧ್ಯಾಹ್ನ ಆರೋಪಿಗಳಾದ ಪ್ರಭಾಕರ ಮತ್ತು ರಾಜೇಶ ಎಂಬವರು ಮದಗ ಹೊಳೆಯಿಂದ ಅಕ್ರಮವಾಗಿ ಮರಳು ತೆಗೆದು ಪರವಾನಿಗೆಯನ್ನು ಪಡೆಯದೆ ಲಾರಿಯಲ್ಲಿ ತುಂಬಿಸಿ ಸಾಗಿಸುತ್ತಿದ್ದ ವೇಳೆ ದಾಳಿ ನಡೆಸಿದ ಪೊಲೀಸರು ಮರಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತು ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

                        

                          

                        

                          

 

Leave a Reply

Your email address will not be published. Required fields are marked *