ಕಾರ್ಕಳ, ಸೆ.15: ಸ್ವಚ್ಛ ಭಾರತ ಕಾರ್ಯಕ್ರಮದಡಿ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್ ಇದೀಗ ಕೇಂದ್ರ ಸರ್ಕಾರದ ಜಲ ಶಕ್ತಿ ಮಂತ್ರಾಲಯ ಗುಣಮಟ್ಟ ಶಾಖೆಯ ‘ಸರಪಂಚ ಸಂವಾದ’ ಎನ್ನುವ ರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ಸಾಧನೆಯ ಯಶೋಗಾಥೆಯನ್ನು ಮಂಡಿಸುವ ಗೌರವಕ್ಕೆ ಪಾತ್ರವಾಗಿದೆ.
ಇಂದು ನವದೆಹಲಿಯಲ್ಲಿ ನಡೆದ
ಸಮಾರಂಭದಲ್ಲಿ ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷ ಸುಕೇಶ್ ಹೆಗ್ಡೆ ಭಾಗವಹಿಸಿ, ಗ್ರಾಮೀಣ ಹಂತದಲ್ಲಿ ಹಮ್ಮಿಕೊಂಡ ಕಾರ್ಯಕ್ರಮಗಳ ಸಾಧನೆಯ ಯಶೋಗಾಥೆಗಳನ್ನು ವಿವರಿಸಿದರು. ಕೇಂದ್ರ ಸರ್ಕಾರದ ವಿಕಸಿತ ಗ್ರಾಮ- ವಿಕಸಿತ ಭಾರತ ಪರಿಕಲ್ಪನೆ ಅಡಿ ದೇಶದ ವಿವಿಧ ರಾಜ್ಯಗಳ ಒಟ್ಟು 75 ಕ್ರಿಯಾಶೀಲ ಗ್ರಾಮ ಪಂಚಾಯತ್ ಅಧ್ಯಕ್ಷರನ್ನು ಈ ಯಶೋಗಾಥೆ ಮಂಡನೆಗೆ ಆಯ್ಕೆ ಮಾಡಲಾಗಿತ್ತು. ಈ ಪೈಕಿ ಕರ್ನಾಟಕದಿಂದ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕಡ್ತಲ ಗ್ರಾಮ ಪಂಚಾಯತ್, ಬ್ರಹ್ಮಾವರ ತಾಲೂಕಿನ ಕಾಡೂರು ಗ್ರಾಮ ಪಂಚಾಯತ್ ಹಾಗೂ ಹಾಸನ ಜಿಲ್ಲೆಯ ಸಕಲೇಶಪುರದ ಬೆ
ಬಿರಡಹಳ್ಳಿ ಗ್ರಾಮ ಪಂಚಾಯತ್ ಆಯ್ಕೆಯಾಗಿದ್ದವು.