ಅಜೆಕಾರು: ಜನನಿ ಸಂಜೀವಿನಿ ಒಕ್ಕೂಟದ ಮಹಾಸಭೆಯುಕಡ್ತಲ ಗ್ರಾಮ ಪಂಚಾಯತ್ ಸಭಾಂಗಣ ದಲ್ಲಿ ಇಂದು ನಡೆಯಿತು.
ಸಭೆಯಲ್ಲಿ ಉಡುಪಿ ಜಿಲ್ಲಾ ಪಂಚಾಯತ್ ನಲ್ಲಿ ಮುಖ್ಯ ಯೋಜನಾಧಿಕಾರಿ ಮತ್ತು ಉಪಕಾರ್ಯದರ್ಶಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಶ್ರೀನಿವಾಸ ರಾವ್ ಇವರನ್ನು ಕಡ್ತಲ ಗ್ರಾಮ ಪಂಚಾಯತ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಕಡ್ತಲ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುಕೇಶ್ ಹೆಗ್ಡೆ, ಉಪಾಧ್ಯಕ್ಷರಾದ ಲಕ್ಷ್ಮಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಖಾ, ಗ್ರಾಮ ಪಂಚಾಯತ್ ಸದಸ್ಯರು ಗಳು, ಜನನಿ ಸಂಜೀವಿನಿ ಒಕ್ಕೂಟದ ಅಧ್ಯಕ್ಷರಾದ ರೇವತಿ, ಒಕ್ಕೂಟದ ಪದಾಧಿಕಾರಿಗಳು ಹಾಗೂ ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.