
ಕಾರ್ಕಳ, ಫೆ.10:ಸಾರ್ವಜನಿಕರಿಂದ ಅಹವಾಲು ಸ್ವೀಕಾರ,ಫಲಾನುಭವಿಗಳಿಗೆ ಸವಲತ್ತು ವಿತರಣಾ ಕಾರ್ಯಕ್ರಮವು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಕಡ್ತಲ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಮಂಗಳವಾರ ನಡೆಯಿತು.
ಸಾರ್ವಜನಿಕರ ಅಹವಾಲು ಸ್ವೀಕರಿಸಿ ಬಳಿಕ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಿ ಮಾತನಾಡಿ, ಸರ್ಕಾರದ ಸವಲತ್ತುಗಳು ಅರ್ಹರಿಗೆ ತಲುಪಿದಾಗ ಯೋಜನೆಗಳು ಯಶಸ್ವಿಯಾಗಲು ಸಾಧ್ಯ ಎಂದರು.
ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರಶಾಂತ್ ಎಮ್ ವಿ, ಕಾರ್ಕಳ ತಾಲೂಕು ಕಚೇರಿಯ ತಹಸೀಲ್ದಾರ್ ಪ್ರದೀಪ್ ಆರ್, ಎಲ್ಲಾ ಇಲಾಖೆಯ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುರೇಖಾ ಸ್ವಾಗತಿಸಿ, ಗ್ರಾಮ ಆಡಳಿತ ಅಧಿಕಾರಿ ಪ್ರಶಾಂತ್ ಇವರು ವಂದಿಸಿದರು. ಸದಸ್ಯರಾದ ಸತೀಶ್ ಪೂಜಾರಿ ಇವರು ಕಾರ್ಯಕ್ರಮ ನಿರೂಪಿಸಿದರು.

.
.
.
.
.
.
.
.
.
.
