ಅಜೆಕಾರು: ಅಜೆಕಾರು ಪೊಲೀಸ್ ಠಾಣಾ ವ್ಯಾಪ್ತಿಯ ಮರ್ಣೆ ಗ್ರಾಮದ ಕಾಡುಹೊಳೆ ಎಂಬಲ್ಲಿ ಕಾರುಗಳೆರಡು ಮುಖಾಮುಖಿ ಢಿಕ್ಕಿಯಾದ ಪರಿಣಾಮ ಓರ್ವ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಗುರುವಾರ ಸಂಜೆ ಓಮಿನಿ ಕಾರು ಭದ್ರಾವತಿಯಿಂದ ಕಾರ್ಕಳ ಮಾರ್ಗವಾಗಿ ಮಂಗಳೂರಿಗೆ ಹೋಗುತ್ತಿದ್ದಾಗ ಮರ್ಣೆ ಗ್ರಾಮದ ನಂದಾರು ಎಂಬಲ್ಲಿ ಕಾರ್ಕಳ ಕಡೆಯಿಂದ ಬಂದ ಕಾರಿಗೆ ಢಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಎರಡೂ ಕಾರುಗಳು ಜಖಂಗೊAಡಿದ್ದು, ಓಮ್ನಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ಈ ಕುರಿತು ಅಜೆಕಾರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.