ಕಾರ್ಕಳ: ಕಾರ್ಕಳ ತಾಲೂಕಿನ ಕಲ್ಯಾ ಗ್ರಾಮದ ಕೈರಬೆಟ್ಟು ಎಂಬಲ್ಲಿ ಬೈಕಿಗೆ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ನಿಟ್ಟೆ ಕಾಲೇಜಿನ ವಿದ್ಯಾರ್ಥಿ ಗಾಯಗೊಂಡಿದ್ದಾನೆ.
ನಿಟ್ಟೆ ಇಂಜಿನಿಯರಿಂಗ್ ಕಾಲೇಜಿನ ದ್ವಿತೀಯ ಎಂಸಿಎ ವಿದ್ಯಾರ್ಥಿ ಶ್ರೀಜೇಶ್ ಜಿ(24ವ) ಗಾಯಗೊಂಡವರು. ಅಲೆವೂರು ನಿವಾಸಿ ಶ್ರೀಜೇಶ್ ಸೋಮವಾರ ತನ್ನ ಬೈಕಿನಲ್ಲಿ ಉಡುಪಿ-ಪಳ್ಳಿ-ಕಾರ್ಕಳ ಮಾರ್ಗವಾಗಿ ಕಾಲೇಜಿಗೆ ಬರುತ್ತಿದ್ದಾಗ ಕಲ್ಯಾ ಗ್ರಾಮದ ಕೈರಬೆಟ್ಟು ಎಂಬಲ್ಲಿ ಕಾರ್ಕಳದಿಂದ ಪಳ್ಳಿ ಕಡೆಗೆ ಹೋಗುತ್ತಿದ್ದ ಲಾರಿ ಡಿಕ್ಕಿಯಾಗಿದೆ.
ಅಪಘಾತದ ಪರಿಣಾಮ ಶ್ರೀಜೇಶ್ ಬೈಕ್ ಸಹಿತ ರಸ್ತೆಗೆ ಬಿದ್ದು ಗಾಯಗೊಂಡಿದ್ದಾನೆ. ಕೂಡಲೇ ಆತನನ್ನು ಚಿಕಿತ್ಸೆಗಾಗಿ ಕಾರ್ಕಳ ಟಿಎಂಎ ಪೈ ಆಸ್ಪತ್ರೆಗೆ ದಾಖಲಿಸಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅಪಘಾತಕ್ಕೆ ಲಾರಿ ಚಾಲಕನ ಅತೀವೇಗ ಹಾಗೂ ಅಜಾಗರೂಕತೆಯೇ ಕಾರಣ ಎನ್ನಲಾಗಿದ್ದು, ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.













