Share this news

ಬೆಂಗಳೂರು: ಕನ್ನಡ ನಾಡಿನಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಎಲ್ಲಾ ಹಂತದ ಉದ್ಯೋಗಗಳನ್ನು ಕನ್ನಡಿಗರಿಗೆ ನೀಡುವಂತೆ ಸೂಕ್ತ ಕಾಯ್ದೆಯನ್ನು ರೂಪಿಸಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆಯಿಂದ ಇಂದು ರಾಜ್ಯಾದ್ಯಂತ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಸ್ವಾತಂತ್ರ‍್ಯ ಉದ್ಯಾನದಲ್ಲಿ ಕರವೇ ಅಧ್ಯಕ್ಷ ಟಿ.ಎ.ನಾರಾಯಣಗೌಡ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಯಲಿದ್ದು, ಜಿಲ್ಲಾ ಕೇಂದ್ರಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎದುರು ಕರವೇ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಲಾಗುತ್ತದೆ.

ಇತರೆ ರಾಜ್ಯಗಳಿಂದ ಉದ್ಯೋಗ ಅರಸಿ ಬೆಂಗಳೂರಿನತ್ತ ವಲಸೆ ಬರುವವರ ಸಂಖ್ಯೆ ಹೆಚ್ಚಳವಾಗಿದೆ. ಖಾಸಗಿ ವಲಯಗಳಲ್ಲಿ ಕನ್ನಡೇತರರಿಗೆ ಹೆಚ್ಚಿನ ಉದ್ಯೋಗ ಅವಕಾಶ ನೀಡಲಾಗುತ್ತಿದೆ. ಇದರಿಂದ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಖಾಸಗಿ ವಲಯದಲ್ಲಿ ಸಿ ಮತ್ತು ಡಿ ದರ್ಜೆಯ ಹುದೆಗಳಲ್ಲಿ ಶೇಕಡಾ 100 ರಷ್ಟು ಕನ್ನಡಿಗರಿಗೆ ಮೀಸಲಾತಿ ನೀಡಬೇಕು. ಇತರೆ ಗ್ರೂಪ್ ಗಳಲ್ಲಿ ಶೇಕಡಾ 80 ರಷ್ಟು ಮೀಸಲಾತಿ ನೀಡುವಂತೆ ಆಗ್ರಹಿಸಲಾಗಿದೆ.

ಕನ್ನಡಿಗರಿಗೆ ಉದ್ಯೋಗಕ್ಕಾಗಿ ನಡೆಯುವ ಪ್ರತಿಭಟನೆಗೆ ಕನ್ನಡ ಸಾಹಿತ್ಯ ಪರಿಷತ್ತು ತನ್ನ ಬೆಂಬಲ ಘೋಷಿಸಿದೆ. ಅದೇ ರೀತಿ ನಟಿ ಪೂಜಾ ಗಾಂಧಿ, ನೆನಪಿರಲಿ ಪ್ರೇಮ್ ಸೇರಿದಂತೆ ಅನೇಕ ಕಲಾವಿದರು ಬೆಂಬಲ ಸೂಚಿಸಿದ್ದಾರೆ.ಸಾಹಿತ್ಯ, ಸಂಗೀತ, ಜಾನಪದ ಸೇರಿದಂತೆ ಸಾಂಸ್ಕೃತಿಕ ವಲಯದ ಅನೇಕರು ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ.

 

 

                        

                          

 

 

 

 

 

                        

                          

 

 

 

 

 

Leave a Reply

Your email address will not be published. Required fields are marked *