ಉಡುಪಿ : ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ನಾಗಬನ ಕ್ಯಾಂಪಸ್ ಹಾಗೂ ಮಣಿಪಾಲ್ ಜ್ಞಾನಸುಧಾ ಪದವಿ ಪೂರ್ವ ಕಾಲೇಜು, ವಿದ್ಯಾನಗರ ಈ ಉಭಯ ಸಂಸ್ಥೆಗಳ ಜಂಟಿ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸ ಆಚರಿಸಲಾಯಿತು.
ಮುಖ್ಯ ಅತಿಥಿಯಾಗಿ ಸಂವೇದನಾ ಫೌಂಡೇಶನ್ ಸಂಸ್ಥಾಪಕ ಶ್ರೀ ಪ್ರಕಾಶ್ ಮಲ್ಪೆ ಅವರು ಭಾಗವಹಿಸಿ ಕಾರ್ಗಿಲ್ ಕಥನಗಳನ್ನು ಹೇಳುವುದರೊಂದಿಗೆ ಇಂದಿನ ವಿದ್ಯಾರ್ಥಿಗಳು ತಮ್ಮ ವಿದ್ಯಾಭ್ಯಾಸದ ಜೊತೆಗೆ ದೇಶಭಕ್ತಿಯನ್ನು ರೂಢಿಸಿಕೊಳ್ಳಬೇಕು ಜೊತೆಗೆ ದೇಶ ಕಾಯುವ ಸೈನಿಕರನ್ನು ಗೌರವಿಸುವ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಈ ಸಂದರ್ಭದಲ್ಲಿ ಭಾರತೀಯ ನೌಕಾ ಸೇನೆಯ ನಿವೃತ್ತ ಪೆಟ್ಟಿ ಆಫೀಸರ್ ಕೆ ಗಣೇಶ್ ರಾವ್ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು. ಉಡುಪಿ ಜ್ಞಾನಸುಧಾ ಪ್ರಾಂಶುಪಾಲರಾದ ಸಂತೋಷ್, ಉಪಪ್ರಾಂಶುಪಾಲರಾದ ಪ್ರಕಾಶ್ ಜೋಗಿ ಮಣಿಪಾಲ್ ಜ್ಞಾನಸುಧಾ ಪ್ರಾಂಶುಪಾಲರಾದ ಗಣೇಶ ಶೆಟ್ಟಿ, ಉಪ ಪ್ರಾಂಶುಪಾಲರಾದ ಹೇಮಂತ, ರವಿ ಜಿ. ಉಪಸ್ಥಿತರಿದ್ದರು.
ಕಾರ್ಗಿಲ್ ವಿಜಯ ದಿವಸದ ಶುಭಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಸಿಹಿ ಹಂಚಲಾಯಿತು. ಮಣಿಪಾಲ್ ಜ್ಞಾನಸುಧಾ ಆಂಗ್ಲ ಭಾಷಾ ಉಪನ್ಯಾಸಕಿ ಶ್ರೀಮತಿ ಶಮಿತಾ ಕಾರ್ಯಕ್ರಮ ನಿರೂಪಿಸಿದರು.