ಕಾರ್ಕಳ:ಕುದುರೆಮುಖ ವನ್ಯಜೀವಿ ವಿಭಾಗದ ವತಿಯಿಂದ 70ನೇ ವನ್ಯಜೀವಿ ಸಪ್ತಾಹದ ಸಮಾರೋಪ ಸಮಾರಂಭವು ಸುಂದರ ಪುರಾಣಿಕ ಸ್ಮಾರಕ ಸಂಯುಕ್ತ ಪ್ರೌಢಶಾಲೆಯಲ್ಲಿ ನಡೆಯಿತು.
ಕುದುರೆಮುಖ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ ಬಾಬು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸುಂದರ ಪುರಾಣಿಕ ಸ್ಮಾರಕ ಸಂಯುಕ್ತ ಪ್ರೌಢಶಾಲೆಯ SDMC ಅಧ್ಯಕ್ಷ ಆನಂದ್ರಾಯ ನಾಯಕ್,ಶಿಕ್ಷಕ ಹರಿಶ್ಚಂದ್ರ ಬಾಯರಿ ಉಪಸ್ಥಿತರಿದ್ದರು.
ಸತೀಶ್ ಎನ್ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕುದುರೆಮುಖ ವನ್ಯಜೀವಿ ಉಪವಿಭಾಗ ಇವರು ಗೌರವ ಉಪಸ್ಥಿತರಿದ್ದರು.
ಕಾರ್ಯಕ್ರಮದಲ್ಲಿ ಮಂಜುನಾಥ ಪೈ ಸ್ಮಾರಕ ಪದವಿ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಕ್ರೈಸ್ಟ್ ಕಿಂಗ್ ಪದವಿ ಪೂರ್ವ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು,ಕೆ ಸುಂದರ ಪುರಾಣಿಕ ಸ್ಮಾರಕ ಸಂಯುಕ್ತ ಪ್ರೌಢಶಾಲೆಯ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಹಾಗು ಕುದುರೆಮುಖ ವನ್ಯಜೀವಿ ವಿಭಾಗದ ಎಲ್ಲಾ ಸಿಬ್ಬಂದಿಗಳು ಹಾಜರಿದ್ದರು.
ಕಾರ್ಯಕ್ರಮದಲ್ಲಿ ಪ್ರಾಥಮಿಕ ಶಾಲೆಯಿಂದ ಪದವಿ ಪೂರ್ವಕಾಲೇಜಿನ ವಿದ್ಯಾರ್ಥಿಗಳಿಗೆ ವಿಭಾಗ ಮಟ್ಟದಲ್ಲಿ ನಡೆಸಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಉಪ ವಲಯ ಅರಣ್ಯಾಧಿಕಾರಿ
ರಾಜು ಎಲ್.ಜೆ ಸ್ವಾಗತಿಸಿದರು.ವಲಯ ಅರಣ್ಯಾಧಿಕಾರಿ ಶಶಿಧರ ಗೌಡ ಪಾಟೀಲ್ ವಂದಿಸಿದರು.
ಉಪ ವಲಯ ಅರಣ್ಯಾಧಿಕಾರಿ ರಂಜಿತ್ ಕುಮಾರ್ ಕಾರ್ಯಕ್ರಮ ನಿರೂಪಿದರು.