ಕಾರ್ಕಳ: ಸ್ನಾನ ಮಾಡುತ್ತಿದ್ದ ವೇಳೆ ಹಠಾತ್ತಾಗಿ ಎದೆನೋವು ಕಾಣಿಸಿಕೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಸೋಮವಾರ ನಡೆದಿದೆ.
ಕಸಬಾ ಗ್ರಾಮದ ಪತ್ತೊಂಜಿಕಟ್ಟೆ ಗುಂಡ್ಯ ನಿವಾಸಿ ವಿಜಯ (55ವ) ಮೃತಪಟ್ಟವರು. ಅವರು ಸೋಮವಾರ ಸಂಜೆ ತಮ್ಮ ಮನೆಯಲ್ಲಿ ಸ್ನಾನಕ್ಕೆಂದು ಹೋಗಿದ್ದ ವೇಳೆ ಅವರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರ ಪತ್ನಿ ವಿಜಯರನ್ನು ಚಿಕಿತ್ಸೆಗಾಗಿ ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದರು. ಆದರೆ ಅವರು ಆ ವೇಳೆಗಾಗಲೇ ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.














