
ಕಾರ್ಕಳ, ಫೆ. 23: ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ತೆಂಗಿನಕಾಯಿ ಕೊಯ್ಯುವ ವೇಳೆ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.ಪಳ್ಳಿ ಗ್ರಾಮದ ನಿವಾಸಿ ಜಗದೀಶ್ ಸಾಧು ಪೂಜಾರಿ(48) ಮೃತಪಟ್ಟವರು.
ಬೆಳಗಾವಿಯ ಹೋಟೆಲ್ ಒಂದರಲ್ಲಿ ಕೆಲಸ ಮಾಡಿಕೊಂಡಿದ್ದ ಅವರು ಕಳೆದ 25 ದಿನಗಳ ಹಿಂದೆ ಪಳ್ಳಿಗೆ ಬಂದಿದ್ದು, ಫೆ7 ರಂದು ದಿಡಿಂಬೆಟ್ಟುವಿನ ಪತ್ನಿಯ ಮನೆಯ ಬಳಿ ಬಟ್ಟೆ ಒಗೆಯುವ ಕಲ್ಲಿನ ಮೇಲೆ ಹತ್ತಿ ತೆಂಗಿನಕಾಯಿ ಕೊಯ್ಯುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದರು.
ಕೂಡಲೇ ಅವರನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರು ಚಿಕಿತ್ಸೆ ಫಲಿಸದೆ ಫೆ.21ರಂದು ಮೃತಪಟ್ಟಿದ್ದಾರೆ.
ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


.
.
.
.
.
.
.
.
.
.
