ಕಾರ್ಕಳ: ವಿಷ ಸೇವಿಸಿ ಅತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ. ಕಾರ್ಕಳ ಹವಾಲ್ದಾರ ಬೆಟ್ಟು ಕಾಲೊನಿ ನಿವಾಸಿ ಶ್ರೀನಿವಾಸ (46) ಮೃತಪಟ್ಟವರು.
ಶ್ರೀನಿವಾಸ ಜ.9 ರಂದು ಮನೆಯಲ್ಲಿದ್ದ ವೇಳೆ ವಿಷ ಸೇವಿಸಿ ವಾಂತಿ ಮಾಡಿಕೊಳ್ಳುತ್ತಿರುವುದನ್ನು ನೊಡಿ ಮನೆಯವರು ಕಾರ್ಕಳ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಬಳಿಕ ಅಲ್ಲಿಂ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳುರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು, ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಜ.14 ರಂದು ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.