ಕಾರ್ಕಳ: ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿರುವ ಘಟನೆ ಡಿ.6 ರಂದು ನಡೆದಿದೆ.
ಕಾರ್ಕಳ ತಾಲೂಕು ಮಾಳ ಗ್ರಾಮದ ನಿವಾಸಿ ಉಮೇಶ (21) ಎಂಬವರು ವೈಯಕ್ತಿಕ ಕಾರಣದಿಂದ ಮನನೊಂದು ನ.26 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಕೂಡಲೇ ಅವರಿಗೆ ಕಾರ್ಕಳ ಸಿಟಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ಡಿ.6 ರಂದು ರಾತ್ರಿ ಮೃತಪಟ್ಟಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.