ಕಾರ್ಕಳ : ಯುವಕನೋರ್ವ ಹುಟ್ಟುಹಬ್ಬದ ದಿನದಂದೇ ಆತ್ಮಹತ್ಯೆಗೆ ಶರಣಾದ ಘಟನೆ ಸೆ. 28ರಂದು ಕಾರ್ಕಳ ತಾಲೂಕಿನ ಸಾಣೂರಿನಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಸುಮನ್ ಶೆಟ್ಟಿ (22) ಎಂದು ಗುರುತಿಸಲಾಗಿದೆ. ಕಡಬಬೆಟ್ಟು ಜನನಿಬೀಡ ಪ್ರದೇಶದಲ್ಲಿರುವ ಬಾವಿಗೆ ಸುಮನ್ ಹಾರಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಸಾಣೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಹೋಗಿ ಬರುವುದಾಗಿ ಮನೆಯಿಂದ ಹೊರಟ ಸುಮನ್ ಮನೆಗೆ ವಾಪಾಸ್ಸಾಗದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಹುಡುಕಾಟ ನಡೆಸಿದ್ದು, ಈ ವೇಳೆ ಬಾವಿಯಲ್ಲಿ ಮೃತದೇಹ ಪತ್ತೆಯಾಗಿರುತ್ತದೆ. ಕಾರ್ಕಳ ಅಗ್ನಿಶಾಮಕ ದಳದ ಸಿಬ್ಬಂದಿ ಮೃತ ಶರೀರವನ್ನು ಮೇಲಕ್ಕೆತ್ತಿದ್ದಾರೆ.
ಕಾರ್ಕಳ ನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
in