

ಕಾರ್ಕಳ: ರಾಜಕೀಯ ಪಕ್ಷದ ಇಬ್ಬರು ಕಾರ್ಯಕರ್ತರು ಸಾಮಾಜಿಕ ಜಾಲತಾಣ ಫೇಸ್ಬುಕ್‌ನಲ್ಲಿ ಪತ್ರಕರ್ತರ ವಿರುದ್ಧ ಆಕ್ಷೇಪಾರ್ಹ ಪದಬಳಸಿ ಪೋಸ್ಟ್ ಹಾಕಿ ಹರಿಯಬಿಟ್ಟಿರುವುದನ್ನು ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘವು ಖಂಡಿಸಿದೆ.
ಈ ಕುರಿತು ಶುಕ್ರವಾರ ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಇವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪ್ರಖ್ಯಾತ್ ಬಿ.ಜೆ ಮತ್ತು ಹರಿಪ್ರಸಾದ್ ಶೆಟ್ಟಿ ಎಂಬಿಬ್ಬರು ತಮ್ಮ ಫೇಸ್ಬುಕ್‌ನಲ್ಲಿ ಮಾಧ್ಯಮವನ್ನು ನಿಂದಿಸಿ ಬರೆದಿರುವ ಬಗ್ಗೆ ಚರ್ಚಿಸಿ ಖಂಡನಾ ನಿರ್ಣಯ ಕೈಗೊಳ್ಳಲಾಯಿತು. ಬಳಿಕ ಎಎಸ್ಪಿ ಹರ್ಷ ಪ್ರಿಯಂವದ ಅವರಿಗೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೂರು ನೀಡಲಾಯಿತು. ದೂರು ಸ್ವೀಕರಿಸಿದ ಎಎಸ್ಪಿಯವರು ಕೂಡಲೇ ಈ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು
ಈ ಸಂದರ್ಭದಲ್ಲಿ ಕಾರ್ಕಳ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಉಪಾಧ್ಯಕ್ಷ ಹರೀಶ್ ಸಚ್ಚರಿಪೇಟೆ, ಕಾರ್ಯದರ್ಶಿ ಹರೀಶ್ ಆಚಾರ್ಯ, ಜಿಲ್ಲಾ ಪ್ರತಿನಿಧಿ ಉದಯ್ ಮುಂಡ್ಕೂರು, ಸಂಪತ್ ನಾಯಕ್, ಸತೀಶ್ ಶೆಟ್ಟಿ, ರಾಮ್ ಅಜೆಕಾರು, ಅವಿನ್ ಶೆಟ್ಟಿ, ವಾಸುದೇವ್ ಭಟ್, ನಿರಂಜನ್ ಜೈನ್ ಉಪಸ್ಥಿತರಿದ್ದರು.






