ಕಾರ್ಕಳ: ಅನ್ನನಾಳದ ಸಮಸ್ಯೆಯಿಂದ ಬಳಲುತ್ತಿದ್ದ ಮದ್ಯವ್ಯಸನಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಕಾರ್ಕಳ ತಾಲೂಕಿನ ಕಸಬಾ ದಲ್ಲಿ ಏ.2 ರಂದು ನಡೆದಿದೆ.
ಕಸಬಾ ನಿವಾಸಿ ಜಗದೀಶ್ (52) ಮೃತಪಟ್ಟವರು.
ಜಗದೀಶ್ ವಿಪರೀತ ಶರಾಬು ಕುಡಿಯುವ ಚಟ ಹೊಂದಿದ್ದು ಕಳೆದ 3 ವರ್ಷಗಳಿಂದ ಅನ್ನನಾಳದ ಸಮಸ್ಯೆಯಿಂದಲೂ ಬಳಲುತ್ತಿದ್ದರು. ಬುಧವಾರ (ಏ.2) ಬೆಳಿಗ್ಗೆ ಮನೆಯಲ್ಲಿದ್ದ ವೇಳೆ ವಿಪರೀತ ಕೆಮ್ಮು ಬಂದಿದ್ದು ಅವರನ್ನು ಕಾರ್ಕಳ ಸರಕಾರಿ ಆಸ್ಪತ್ರೆಗೆ ಕರೆದೊಯ್ದಾಗ ಅಲ್ಲಿ ರಕ್ತ ವಾಂತಿ ಮಾಡಿಕೊಂಡಿದ್ದರು. ಕೂಡಲೇ ವೈದ್ಯರು ಅವರನ್ನು ಪರೀಕ್ಷಿಸಿದಾಗ ಜಗದೀಶ್ ಅದಾಗಲೇ ಮೃತಪಟ್ಟಿದ್ದರು.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.